ಶಿಯೋಮಿ ಮಿ 10 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳಿಗೇನೂ ಭರವಿಲ್ಲ. ಪ್ರತಿನಿತ್ಯ ಹೊಸ ಮಾದರಿಯ ಆಕರ್ಷಕ ಫೀಚರ್ಸ್‌ಗಳನ್ನ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಗುತ್ತಲೇ ಇರುತ್ತವೆ. ಸ್ಮಾರ್ಟ್‌ಫೋನ್‌ಗಳಲ್ಲಿ ಎಷ್ಟೇ ವೈವಿಧ್ಯತೆ ಕಂಡು ಬಂದರೂ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳೆಂದರೆ ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಒಂದು ರೀತಿಯ ಕುತೂಹಲ ಇರುತ್ತದೆ. ಸದ್ಯ ಇದೀಗ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನದೇ ಜನಪ್ರಿಯತೆ ಪಡೆದಿರುವ ಶಿಯೋಮಿ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ.

ಹೌದು

ಹೌದು, ಚೀನಾ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ ಶಿಯೋಮಿ ತನ್ನ ಹೊಸ ಶಿಯೋಮಿ mi 10 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದೆ. ಅಲ್ಲದೆ ಇದು ಹೆಚ್ಚು ಪರಿಣಾಮಕಾರಿಯಾದ LPDDR5 RAM ಅನ್ನು ಹೊಂದಿದೆ. ಜೊತೆಗೆ ವೇಗವಾಗಿ ಕಾರ್ಯನಿರ್ವಹಿಸುವ UFS 3.0 ಸ್ಟೋರೆಜ್‌ ಅನ್ನು ಒಳಗೊಂಡಿದೆ. ಅಷ್ಟಕ್ಕೂ ಶಿಯೋಮಿ ಮಿ10ಪ್ರೊ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಶಿಯೋಮಿ ಮಿ10 ಪ್ರೊ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹೆಚ್‌ಡಿಆರ್‌10+ ಆಮೋಲ್ಡ್‌ ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೇಶ್‌ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 180 Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಹೊಂದಿದ್ದು, ಇದು 1200nit ನಷ್ಟು ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇದಲ್ಲದೆ 4096 ಮಟ್ಟದವರೆಗೂ ಬ್ರೈಟ್‌ನೆಶ್‌ ಅನ್ನು ಹೊಂದಿಸಬಹುದಾಗಿದ್ದು, ಡಿಸಿ ಡಿಮ್ಮಿಂಗ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 865 SoC,ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM +256GB, 12GB RAM ಮತ್ತು 256GB, 12GB RAM + 512GB ಸ್ಟೋರೇಜ್‌ ವೇರಿಯೆಂಟ್‌ ಸಾಮರ್ಥ್ಯದ ಆಯ್ಕೆಗಳನ್ನು ಒಳಗೊಂಡಿದೆ. ಇದಲ್ಲದೆ ವಿಸ್ತರಿಸಬಹುದಾದ ಸಂಗ್ರಹಣಾ ಸಾಮರ್ಥ್ಯದಲ್ಲಿ LPDDR5 RAM ಹಾಗೂ UFS 3.0 ಸ್ಟೋರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಶಿಯೋಮಿ ಮಿ10 ಪ್ರೊ ಸ್ಮಾರ್ಟ್‌ಫೋನ್‌ ನ ಬಹುಮುಖ್ಯ ವಿಶೇಷತೆ ಅಂದರೆ ಇದರ ಕ್ಯಾಮೆರಾ ಮೆಗಾಪಿಕ್ಸೆಲ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ರಿಯರ್‌ ಸೆಟ್‌ಆಪ್‌ ಅನ್ನು ಹೊಂದಿದ್ದು, ಮೊದಲನೇ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 20 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 20ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಮಿ10 ಪ್ರೊ ಸ್ಮಾರ್ಟ್‌ಫೋನ್‌ 50W ವೈರ್ಡ್ ಫಾಸ್ಟ್ ಚಾರ್ಜಿಂಗ್, 30W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುವ 4,500mAh ಬ್ಯಾಟರಿ ಪ್ಯಾಕ್‌ ಆಪ್‌ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಮೋಡ್ 5G ನೆಟ್‌ವರ್ಕ್‌, ಮತ್ತು ವೈ-ಫೈ 6 ಸ್ಟ್ಯಾಂಡರ್ಡ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಬ್ಲೂಟೂತ್‌, ಹಾಟ್‌ಸ್ಪಾಟ್‌ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮಿ 10 ಪ್ರೊ ಸ್ಮಾರ್ಟ್‌ಫೋನ್‌ನ 8GB + 256GB ಆವೃತ್ತಿಗೆ ಬೆಲೆ CNY 4,999 (ಅಂದಾಜು 51,066 ರೂ.) ಆಗಿದ್ದರೆ, 12GB RAM + 256GB ಆವೃತ್ತಿಯ ಸ್ಮಾರ್ಟ್‌ಫೋನ್‌ ಬೆಲೆ CNY 5,499 (ಸುಮಾರು 55,000 ರೂ.) ಆಗಿದೆ, ಇನ್ನು ಟಾಪ್-ಆಫ್-ಲೈನ್ 12GB RAM + 512GB ಆವೃತ್ತಿಯ ಸ್ಮಾರ್ಟ್‌ಫೋನ್‌ ಬೆಲೆ CNY 5,999 (ಅಂದಾಜು 60,000 ರೂ.) ಆಗಿದೆ, ಇನ್ನು ಇದರ ಮೊದಲ ಮಾರಾಟವು ಫೆಬ್ರವರಿ 18 ರಂದು ಚೀನಾದಲ್ಲಿ ಪ್ರಾರಂಭವಾಗಲಿದ್ದು, ಇದು ಪರ್ಲ್ ವೈಟ್ ಮತ್ತು ಸ್ಟಾರಿ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Most Read Articles
Best Mobiles in India

English summary
Xiaomi has launched two new flagship phones - the Mi 10 and Mi 10 Pro.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X