ಶಿಯೋಮಿಯ ಮಿ 10 ಯೂತ್ ಎಡಿಷನ್ 5G ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಇಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಜೊತೆಗೆ ಆಕರ್ಷಕ ಫೀಚರ್ಸ್‌ಗಳನ್ನ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿದೆ. ಇನ್ನು ಹಲವು ಹೊಸತುಗಳಿಗೆ ಕಾರಣವಾಗಿರುವ ಶಿಯೋಮಿ ಇದೀಗ ತನ್ನ ಯೂತ್ ಎಡಿಷನ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ಮಿ 10 ಯೂತ್ ಎಡಿಷನ್ 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫೆಬ್ರವರಿಯಲ್ಲಿ ಬಿಡುಗಡೆಯಾದ ಮಿ 10 ಸ್ಮಾರ್ಟ್‌ಫೋನ್‌ನ ಸ್ವಲ್ಪ ಟೋನ್-ಡೌನ್ ಮಾದರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವೆನಿಲ್ಲಾ ಮಿ10 ಮಾದರಿಯಲ್ಲಿರುವ ಪಂಚ್‌ಹೋಲ್ ಕ್ಯಾಮೆರಾ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್ ನಾಚ್ ಶೈಲಿಯನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ
ಶಿಯೋಮಿ ಮಿ 10 ಯೂತ್ ಎಡಿಷನ್ 5G ಸ್ಮಾರ್ಟ್‌ಫೋನ್ 1080x2400ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.57 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇಯು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು 4,300,000: 1 ಕಾಂಟ್ರಾಸ್ಟ್ ಅನುಪಾತ, ಟಿಯುವಿ ರೈನ್‌ಲ್ಯಾಂಡ್ ಕಣ್ಣಿನ ರಕ್ಷಣೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಅಡ್ರಿನೊ 620 ಜಿಪಿಯು ಹೊಂದಿರುವ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G 5G ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನ ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇನ್ನು ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಅವಕಾಶದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ಕ್ಲಿಯರ್ ಸೆನ್ಸಾರ್ ಮತ್ತು 50x ಪೆರಿಸ್ಕೋಪ್ ಜೂಮ್, 10x ಹೈಬ್ರಿಡ್ ಜೂಮ್ ಮತ್ತು 5x ಆಪ್ಟಿಕಲ್ ಜೂಮ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಇದೆ, ಅದು 120 ಡಿಗ್ರಿ ಫೀಲ್ಡ್ ವ್ಯೂ ಒಳಗೊಂಡಿದೆ, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು 10 ಸೆಂ.ಮೀ ಫೋಕಸಿಂಗ್ ದೂರವನ್ನು ಹೊಂದಿರುವ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಸೀನ್ 2.0, ಎಐ ಸ್ಮಾರ್ಟ್ ಸ್ಲಿಮ್ಮಿಂಗ್, ಪೋರ್ಟ್ರೇಟ್ ಬ್ಲೂ ಅಡ್ಜಸ್ಟ್ಮೆಂಟ್,ಹೊಂದಿದೆ. ಅಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಇದು 3 ಡಿ ಬ್ಯೂಟಿ ಮೇಕಪ್, ಫ್ರಂಟ್ ಪನೋರಮಾ, ಫ್ರಂಟ್ ಎಚ್‌ಡಿಆರ್, ಪೋರ್ಟ್ರೇಟ್ ಮೋಡ್, ಬೇಬಿ ಬ್ಯೂಟಿ, ಫಿಚರ್ಸ್‌ಗಳನ್ನ ಹೊಂದಿದೆ

ಬ್ಯಾಟರಿ ಮತ್ತು ಇತರೆ
ಇನ್ನು ಮಿ 10 ಯೂತ್ ಎಡಿಷನ್ 5G ಸ್ಮಾರ್ಟ್‌ಫೋನ್ 4,160mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. 22.5W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈ-ಫೈ 5, ಬ್ಲೂಟೂತ್ ವಿ 5.1, NFC, ಜಿಪಿಎಸ್, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಅಲ್ಟ್ರಾಸಾನಿಕ್ ದೂರ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಮಿ10 ಯೂತ್ ಎಡಿಷನ್ 5G ಸ್ಮಾರ್ಟ್‌ಫೋನ್ 6GB RAM + 64GB ಸಂಗ್ರಹ ಮಾದರಿಗೆ CNY 2,099 (ಸುಮಾರು 22,500 ರೂ.), 6GB RAM + 128GB ಮಾದರಿಗೆ CNY 2,299 (ಸುಮಾರು ರೂ. 24,700), 8GB RAM + 128GB CNY 2,499 (ಅಂದಾಜು 26,900 ರೂ) ಮತ್ತು ಟಾಪ್-ಎಂಡ್ 8GB RAM + 256GB ಆಯ್ಕೆಗಾಗಿ CNY 2,799 (ಸುಮಾರು 30,100 ರೂ.). ಮಿ 10 ಯೂತ್ ಎಡಿಷನ್ 5G ಬ್ಲ್ಯಾಕ್ ಸ್ಕಿಲ್ ಸ್ಟಾರ್ಮ್, ಬ್ಲೂಬೆರ್ರಿ ಮಿಂಟ್, ಫೋರ್ ಸೀಸನ್ಸ್ ಸ್ಪ್ರಿಂಗ್ ಮಿಲ್ಕ್ ಗ್ರೀನ್, ಪೀಚ್ ದ್ರಾಕ್ಷಿಹಣ್ಣು ಮತ್ತು ವೈಟ್ ಪೀಚ್ ಲಾಂಗ್ ಬಣ್ಣ ಆಯ್ಕೆಗಳಲ್ಲಿ ಲಬ್ಯವಾಗಲಿದ್ದು, ಚೀನಾದಲ್ಲಿ ಏಪ್ರಿಲ್ 30 ರಿಂದ ಈ ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ.


Click it and Unblock the Notifications




