Home
ಸುದ್ದಿಜಾಲ

ನಾಳೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿ ಮಿ 10i ಸ್ಮಾರ್ಟ್‌ಫೋನ್!

ಜನಪ್ರಿಯ ಶಿಯೋಮಿ ಕಂಪನಿಯು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ರೆಡ್ಮಿ ಸರಣಿಯಲ್ಲಿ ಹಾಗೂ ಮಿ ಸರಣಿಯಲ್ಲಿನ ಕೆಲವು ಸ್ಮಾರ್ಟ್‌ಫೋನ್‌ಗಳು ಹೆಚ್ಚು ಡಿಮ್ಯಾಂಡ್‌ ಪಡೆದಿವೆ. ಅದರ ಮುಂದುವರಿದ ಭಾಗವೆಂಬಂತೆ ಸಂಸ್ಥೆಯು ಇದೀಗ ಶಿಯೋಮಿ ಮಿ 10i ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದ್ದು, ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.

ಕ್ಯಾಮೆರಾ

ಹೌದು, ಶಿಯೋಮಿ ಕಂಪನಿಯು ನೂತನವಾಗಿ ಶಿಯೋಮಿ ಮಿ 10i ಸ್ಮಾರ್ಟ್‌ಫೋನ್ ಅನ್ನು ವರ್ಚುವಲ್‌ ಕಾರ್ಯಕ್ರಮದ ಮೂಲಕ ನಾಳೆ (ಜ.5ರಂದು) ಭಾರತೀಯ ಮಾರುಕಟ್ಟೆಗೆ ಅನಾವರಣ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 750G ಪ್ರೊಸೆಸರ್‌ ಅನ್ನು ಕಾರ್ಯನಿರ್ವಹಿಸಲಿದ್ದು, ಹೊಸ ಮಾದರಿಯ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಹಾಗಾದರೇ ಮಿ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಹಾಗೂ ನಿರೀಕ್ಷಿತ ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 125Hz ರಿಫ್ರೆಶ್‌ ರೇಟ್‌ ಜೊತೆಗೆ 450 ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 84.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದ್ದು, ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM+128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರುವ ಸಾಧ್ಯತೆ ಇದೆ.

ಸ್ಪೆಷಲ್ ಕ್ಯಾಮೆರಾ

ಸ್ಪೆಷಲ್ ಕ್ಯಾಮೆರಾ

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ 5820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಸಿಸ್ಟಮ್ ಅನ್ನು ಹೊಂದಿರುತ್ತದೆ ಎಂದು ನಾವು ನಿರೀಕ್ಷಿಸಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, GPS, USB ಟೈಪ್‌ ಸಿ2 ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ ಭಾರತದಲ್ಲಿ ಅಂದಾಜು 25000ರೂ.ಗಳ ಆಸುಪಾಸ ಪ್ರೈಸ್‌ನಲ್ಲಿ ಲಾಂಚ್‌ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಫೋನ್ ಅಮೆಜಾನ್ ಇ-ಕಾಮರ್ಸ್ ಹಾಗೂ ಅಧಿಕೃತ ಕಂಪನಿಯ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Xiaomi Mi 10i will be available on Amazon India website once it goes official in the country.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+