ಭಾರತದಲ್ಲಿ ಶಿಯೋಮಿ ಮಿ10T ಸ್ಮಾರ್ಟ್‌ಫೋನ್ ಬೆಲೆ ಕಡಿತ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ಕಂಪೆನಿ ಭಾರತದಲ್ಲಿ ತನ್ನ ಶಿಯೋಮಿ ಮಿ10 T ಬೆಲೆಯನ್ನು ಕಡಿತ ಮಾಡಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆ ಆದ ಶಿಯೋಮಿ 10T ಬೆಲೆಯಲ್ಲಿ ರೂ. 3,000. ಗಳನ್ನು ಕಡಿಮೆ ಮಾಡಿದೆ. ಇದು ಶಿಯೋಮಿ ಮಿ10T ಫೋನ್‌ನ 6GB RAM ಮತ್ತು 8GB RAM ರೂಪಾಂತರಗಳಿಗೆ ಅನ್ವಯಿಸುತ್ತದೆ.

ಹೌದು, ಶಿಯೋಮಿ ಮಿ10T ಸ್ಮಾರ್ಟ್‌ಫೋನ್ ಬೆಲೆಯನ್ನು ಕಡಿತ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 144Hz ಡಿಸ್‌ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಶಿಯೋಮಿ 10T ಪ್ರೊ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.47 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ
ಮಿ 10ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ , ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.1, GPS, ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಡ್ಯುಯಲ್ ಸ್ಪೀಕರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ 10T ಪ್ರೊ ಸ್ಮಾರ್ಟ್‌ಫೋನ್ ಈಗ 6GB RAM ರೂಪಾಂತರದ ಮೂಲ ಬೆಲೆ 35,999 ರೂ ಆಗಿದ್ದು, ಬೆಲೆ ಕಡಿತದ ನಂತರ 32,999 ರೂ.ಬೆಲೆಗೆ ಲಭ್ಯವಾಗಲಿದೆ. ಅಂತೆಯೇ, ಇದರ 8GB RAM ಆಯ್ಕೆಯ ಸ್ಮಾರ್ಟ್‌ಫೋನ್ ಮೂಲ ಬೆಲೆ 37,999 ರೂ. ಆಗಿದ್ದು, ಇದೀಗ 34,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಸದ್ಯ ನವೀಕರಿಸಿದ ಬೆಲೆ Mi.com ಸೈಟ್‌ನಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅರೋರಾ ಬ್ಲೂ, ಕಾಸ್ಮಿಕ್ ಬ್ಲ್ಯಾಕ್ ಮತ್ತು ಲೂನರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




