ಶಿಯೋಮಿ ಮಿ 11 ಸ್ಮಾರ್ಟ್‌ಫೋನ್‌ ಅನಾವರಣಕ್ಕೆ ದಿನಾಂಕ ನಿಗದಿ!

|

ಜನಪ್ರಿಯ ಶಿಯೋಮಿ ಕಂಪನಿಯು ತನ್ನ ಬಹುನಿರೀಕ್ಷಿತ ಶಿಯೋಮಿ ಮಿ 11 ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 8 ರಂದು ಜಾಗತಿಕವಾಗಿ ಅನಾವರಣ ಲಾಂಚ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SOC ಪ್ರೊಸೆಸರ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಹಾಗೆಯೇ 4600mAh ಬ್ಯಾಟರಿ ಬಾಳಿಕೆಯನ್ನು ಹೊಂದಿದೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆ ತನ್ನ ಹೊಸ ಮಿ 11 ಸ್ಮಾರ್ಟ್‌ಫೋನ್‌ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಹಾಗಾದರೇ ಶಿಯೋಮಿ ಮಿ 11 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಶಿಯೋಮಿ ಮಿ 11 ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81-ಇಂಚಿನ 2K WQHD ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1500 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ಹೊಂದಿದೆ. 5000000: 1 ಕಾಂಟ್ರಾಸ್ಟ್ ಅನುಪಾತ ಮತ್ತು 515 ಪಿಪಿ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಪಂಚ್ ಹೋಲ್‌ ವಿನ್ಯಾಸವನ್ನು ಹೊಂದಿರುವ ಈ ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್‌ ಅನ್ನು ಸಹ ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಶಿಯೋಮಿ ಮಿ 11 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಅನ್ನು ಬೆಂಬಲಿಸಲಿದೆ. ಹಾಗೇಯೇ 8GB RAM+128GB, 8GB RAM+256GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಶಿಯೋಮಿ ಮಿ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 20ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ ಮಿ 11 ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯದ ಬ್ಯಾಟರಿ ಸೆಟಪ್‌ ಅನ್ನು ಹೊಂದಿದೆ. ಇದು ಮಿ ಟರ್ಬೊಚಾರ್ಜ್ 55W ವೈರ್ಡ್ ಮತ್ತು 50W ವಾಯರ್‌ ಲೆಸ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ 10W ವಾಯರ್‌ಲೆಸ್ ರಿವರ್ಸ್ ಚಾರ್ಜಿಂಗ್ ಬೆಂಬಲವೂ ಇದೆ. ಜೊತೆಗೆ ಎಚ್‌ಡಿಆರ್ 10 + ಮತ್ತು ಮೋಷನ್ ಎಸ್ಟಿಮೇಷನ್, ಮೋಷನ್ ಕಾಂಪೆನ್ಸೇಷನ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Xiaomi Mi 11 was launched in China last month with a starting price of CNY 3,999 (roughly Rs. 45,300).

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X