ಭಾರತದಲ್ಲಿ ಶಿಯೋಮಿ ಮಿ 11 ಸ್ಮಾರ್ಟ್‌ಫೋನ್‌ ಸರಣಿ ಲಾಂಚ್‌! ಬೆಲೆ ಎಷ್ಟು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಕಂಪೆನಿ ಬಹು ನಿರೀಕ್ಷಿತ ಮಿ11 ಸ್ಮಾರ್ಟ್‌ಫೋನ್‌ ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ತನ್ನ ವರ್ಚುವಲ್ ಈವೆಂಟ್ ಮೂಲಕ ಶಿಯೋಮಿ ಮಿ 11 ಅಲ್ಟ್ರಾ, ಮಿ 11X, ಮತ್ತು ಮಿ 11X ಪ್ರೊ ಅನ್ನು ಪರಿಚಯಿಸಿದೆ. ಇನ್ನು ಮಿ 11 ಸರಣಿಯಲ್ಲಿ ಮಿ 11 ಅಲ್ಟ್ರಾ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆ ಭಾರತದಲ್ಲಿ ಮಿ 11 ಸ್ಮಾರ್ಟ್‌ಫೋನ್‌ ಸರಣಿಯನ್ನು ಲಾಂಚ್‌ ಮಾಡಿದೆ. ಇದರಲ್ಲಿ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.81 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಆದರೆ ಮಿ 11X ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದಲ್ಲದೆ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಮಿ 11x ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81-ಇಂಚಿನ WQHD + E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 120 Hz ರಿಫ್ರೆಶ್ ರೇಟ್‌, 480Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 515 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 1,700 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌, 5,000,000: 1 ಕಾಂಟ್ರಾಸ್ಟ್ ಅನುಪಾತ ಮತ್ತು 100 ಪ್ರತಿಶತ DCI ​​-P 3 ಬಣ್ಣದ ಹರವು ಹೊಂದಿದೆ. ಇನ್ನು ಈ ಡಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ. ಜೊತೆಗೆ ಇದು ಹಿಂಭಾಗದಲ್ಲಿ ಕೂಡ 1.1-ಇಂಚಿನ ಡಿಸ್‌ಪ್ಲೇ ಹೊಂದಿದೆ.

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ಯಾಮೆರಾ

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ಯಾಮೆರಾ

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಎಫ್ / 2.2 ಲೆನ್ಸ್, ಮೂರನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದ್ದು, ಇದು 120x ಡಿಜಿಟಲ್ ಜೂಮ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67 Wವೈರ್ಡ್ ಮತ್ತು ವಾಯರ್‌ಲೆಸ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ, ಜೊತೆಗೆ 10 Wರಿವರ್ಸ್ ವೈರ್ಲೆಸ್ ಚಾರ್ಜಿಂಗ್ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ 6, ಬ್ಲೂಟೂತ್ ವಿ 5.2, GPS, AGPS, ನ್ಯಾವಿಕ್ ಸಪೋರ್ಟ್, NFC ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಮಿ 11X ಮತ್ತು ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಮಿ 11X ಮತ್ತು ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಮಿ 11X ಮತ್ತು ಮಿ 11X ಪ್ರೊ ಈ ಎರಡೂ ಫೋನ್‌ಗಳು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿವೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿವೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಹೊಂದಿವೆ.

ಮಿ 11X ಮತ್ತು ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಮಿ 11X ಮತ್ತು ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಇನ್ನು ಮಿ 11X ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಆದರೆ ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಹೊಂದಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಮಿ 11X ಮತ್ತು ಮಿ 11X ಪ್ರೊ ಕ್ಯಾಮೆರಾ

ಮಿ 11X ಮತ್ತು ಮಿ 11X ಪ್ರೊ ಕ್ಯಾಮೆರಾ

ಈ ಎರಡೂ ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಇದರಲ್ಲಿ ಮಿ 11X ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇನ್ನು ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಎಚ್‌ಎಂ 2 ಸೆನ್ಸಾರ್‌ ಹೊಂದಿದೆ. ಇತರ ಎರಡು ಕ್ಯಾಮೆರಾಗಳು ಮಿ 11X ಸ್ಮಾರ್ಟ್‌ಫೋನ್‌ ಮಾದರಿಯನ್ನೇ ಹೊಂದಿವೆ. ಇದಲ್ಲದೆ ಈ ಎರಡೂ ಫೋನ್‌ಗಳು 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ.

ಮಿ 11X ಮತ್ತು ಮಿ 11X ಪ್ರೊ ಬ್ಯಾಟರಿ

ಮಿ 11X ಮತ್ತು ಮಿ 11X ಪ್ರೊ ಬ್ಯಾಟರಿ

ಮಿ 11X ಮತ್ತು ಮಿ 11X Pro ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿವೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಎರಡೂ ಫೋನ್‌ಗಳು ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಪಡೆಯುತ್ತವೆ.ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಏಕೈಕ 12GB RAM + 256GB ರೂಪಾಂತರಕ್ಕೆ 69,990 ರೂ. ಬೆಲೆಯನ್ನು ಹೊಂದಿದೆ. ಇದು ಕಪ್ಪು ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಮಾರಾಟದ ದಿನಾಂಕವನ್ನು ಶೀಘ್ರದಲ್ಲಿಯೇ ಕಂಪೆನಿ ಬಹಿರಂಗ ಪಡಿಸಲಿದೆ. ಇನ್ನು ಮಿ 11X ಸ್ಮಾರ್ಟ್‌ಫೋನ್‌ 6GB RAM + 128GB ಮಾದರಿಗೆ 29,999ರೂ. ಹಾಗೂ 8GB RAM + 128GB RAM ಆಯ್ಕೆಗೆ 31,999 ರೂ. ಬೆಲೆಯನ್ನು ಹೊಂದಿದೆ. ಹಾಗೇಯೇ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 8GB RAM + 128GB ಮಾದರಿಗೆ 39,990 ರೂ. ಹಾಗೂ 8GB RAM + 256 GB ರೂಪಾಂತರಕ್ಕೆ 41,999 ರೂ. ಬೆಲೆ ಹೊಂದಿದೆ. ಮಿ 11X ಮತ್ತು ಮಿ 11X ಎಕ್ಸ್ ಪ್ರೊ ಎರಡು ಸ್ಮಾರ್ಟ್‌ಫೋನ್‌ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳಲ್ಲಿ ನೀಡಲಾಗುತ್ತದೆ. Mi 11X ಏಪ್ರಿಲ್ 27 ರಿಂದ ಮಾರಾಟವಾಗಲಿದ್ದು, Mi 11X Pro ಏಪ್ರಿಲ್ 24 ರಿಂದ ಮಾರಾಟವಾಗಲಿದೆ.

Best Mobiles in India

English summary
Xiaomi Mi 11 Ultra, Mi 11X, Mi 11X Pro With 120Hz Refresh Rate Launched in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X