ಭಾರತದಲ್ಲಿ ಶಿಯೋಮಿ ಮಿ 11X ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಲಾಂಚ್‌ ಆಫರ್‌ ಏನು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಕಂಪೆನಿ ಕೆಲವು ದಿನಗಳ ಹಿಂದೆ ತನ್ನ ಮಿ 11 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಲಾಂಚ್‌ ಮಾಡಿತ್ತು. ಇದರಲ್ಲಿ ಮಿ11X ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿತ್ತು. ಇದೀಗ ಮಿ 11X ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇಂದು (ಏ.27) ಮಧ್ಯಾಹ್ನ 12 ಗಂಟೆಗೆ ಮೊದಲ ಬಾರಿಗೆ ಮಿ.ಕಾಮ್ ಮತ್ತು ಅಮೆಜಾನ್ ಇಂಡಿಯಾ ಮೂಲಕ ಮಾರಾಟವಾಗಲಿದೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆಯ ಮಿ 11X ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇಂದು ಮೊದಲ ಬಾರಿಗೆ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇನ್ನು ಶಿಯೋಮಿ ಮಿ 11X ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ 29,999 ರೂ. ಆಗಿದೆ. ಇದು ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮಿ 11X ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮಿ 11X ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಮಿ 11X ಸ್ಮಾರ್ಟ್‌ಫೋನ್‌ 6GB RAM + 128GB ಮಾದರಿಗೆ 29,999ರೂ. ಹಾಗೂ 8GB RAM + 128GB RAM ಆಯ್ಕೆಗೆ 31,999 ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳಲ್ಲಿ ನೀಡಲಾಗುತ್ತದೆ. ಲಾಂಚ್ ಆಫರ್‌ಗಳಲ್ಲಿ ಮಿ ಬ್ಯಾಂಡ್ 5 ಬಂಡಲ್ 500 ರೂ. ಹೆಚ್ಚುವರಿ ರಿಯಾಯಿತಿ. ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಉಚಿತ ಟೈಮ್ಸ್ ಪ್ರೈಮ್ ಸದಸ್ಯತ್ವದೊಂದಿಗೆ ಖರೀದಿಸಲು 3,500 ರೂ.ಕ್ಯಾಶ್‌ಬ್ಯಾಕ್‌ ದೊರೆಯಲಿದೆ.

Best Mobiles in India

English summary
Xiaomi Mi 11X first sale today: Price in India, launch offers.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X