Home
ಸುದ್ದಿಜಾಲ

ಶಿಯೋಮಿ ಮಿ 11X ಪ್ರೊ 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಶಿಯೋಮಿ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ ಈಗಾಗಲೇ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಕಳೆದ ವರ್ಷ ಬಿಡುಗಡೆ ಆಗಿರುವ ಶಿಯೋಮಿ ಮಿ 11X ಪ್ರೊ 5G ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇದೀಗ ಶಿಯೋಮಿ ಮಿ 11X ಪ್ರೊ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದ್ದು, ಮತ್ತೆ ಗ್ರಾಹಕರು ತಿರುಗಿ ನೋಡುವಂತೆ ಆಗಿದೆ.

ಪ್ರೊಸೆಸರ್‌

ಶಿಯೋಮಿ ಕಂಪನಿಯ ಶಿಯೋಮಿ ಮಿ 11X ಪ್ರೊ 5G ಫೋನ್ ತ್ರಿವಳಿ ಕ್ಯಾಮೆರಾ, ಫಾಸ್ಟ್‌ ಚಾರ್ಜಿಂಗ್, ವೇಗದ ಪ್ರೊಸೆಸರ್‌ ನಂತಹ ಫೀಚರ್ಸ್‌ಗಳ ಮೂಲಕ ಸದ್ದು ಮಾಡಿದೆ. ಆದ್ರೆ ಈ ಫೋನ್ ಇದೀಗ ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯ ಇದ್ದು, ಗ್ರಾಹಕರನ್ನು ಆಕರ್ಷಿಸಿದೆ. ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಶಿಯೋಮಿ ಮಿ 11X ಪ್ರೊ 5G ರಿಯಾಯಿತಿ ಬೆಲೆಗೆ ಲಭ್ಯವಿದ್ದು, ಗ್ರಾಹಕರು 13,000ರೂ. ಗಳ ವರೆಗೆ ಡಿಸ್ಕೌಂಟ್‌ ಪಡೆಯಬಹುದು.

ಫೋನ್

ಶಿಯೋಮಿ 11X ಪ್ರೊ ಫೋನ್ 39,999 ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಅಮೆಜಾನ್‌ನಲ್ಲಿ ಸೇಲ್‌ನಲ್ಲಿ ಈ ಫೋನ್ 26,999 ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗಾದರೇ ಶಿಯೋಮಿ 11X ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಹೊಂದಿದ್ದು, 10 ಬಿಟ್ ಟ್ರೂಲಿ ಕಲರ್‌ ಫ್ಲಾಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಡಾಲ್ಬಿ ವಿಷನ್ ಬೆಂಬಲಿಸಲಿದ್ದು, 480Hz ವರೆಗೆ ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

ಪ್ರೊಸೆಸರ್‌ ಕಾರ್ಯ ಹೇಗೆ

ಪ್ರೊಸೆಸರ್‌ ಕಾರ್ಯ ಹೇಗೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಜೊತೆಗೆ 3GB ವರ್ಚುವಲ್ RAM ವಿಸ್ತರಣೆಗೆ ಸಹ ಬೆಂಬಲಿಸಲಿದೆ. ಹೆಚ್ಚಿನ RAM ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸಲಿದೆ. ಇನ್ನು ಇದರ ವೇಗದ ಪ್ರೊಸೆಸರ್‌ ಫೋನಿನ ಕಾರ್ಯ ವೈಖರಿಗೆ ಪೂರಕ ಎನಿಸಲಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು

ಕ್ಯಾಮೆರಾ ಸೆನ್ಸಾರ್ ಎಷ್ಟು

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ HM2 ಸೆನ್ಸಾರ್‌ f/1.75 ವೈಡ್ ಆಂಗಲ್ ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್ ಎಫ್/2.2 ಲೆನ್ಸ್‌ 120 ಡಿಗ್ರಿಗಳ ಫೀಲ್ಡ್ ಆಫ್ ವ್ಯೂ (FoV) ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಟೆಲಿಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಟೈಮ್-ಲ್ಯಾಪ್ಸ್, ಸಿನಿಮಾಟಿಕ್ ಫಿಲ್ಟರ್‌ಗಳು ಮತ್ತು ಆಡಿಯೊ ಜೂಮ್‌ನಂತಹ 50 ಕ್ಕೂ ಹೆಚ್ಚು ಡೈರೆಕ್ಟರ್ ಮೋಡ್‌ಗಳೊಂದಿಗೆ ಪ್ರೀ ಲೋಡ್ ಆಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು ಏನಿವೆ

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು ಏನಿವೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಹೈಪರ್‌ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS/ NavIC, NFC, ಇನ್ಫ್ರಾರೆಡ್ (IR) ಬ್ಲಾಸ್ಟರ್, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟಿಕ್ ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಸೇರಿವೆ. ಈ ಫೋನ್ ವೇಗದ ಚಾರ್ಜಿಂಗ್ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆಯುತ್ತದೆ.

ಮೆಮೊರಿ ಆಯ್ಕೆ ಮತ್ತು ಕಲರ್‌ ಆಯ್ಕೆ

ಮೆಮೊರಿ ಆಯ್ಕೆ ಮತ್ತು ಕಲರ್‌ ಆಯ್ಕೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್ ರೂಪಾಂತರ, 12GB RAM ಮತ್ತು 256GB ಮತ್ತು 8GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸೆಲೆಸ್ಟಿಯಲ್ ಮ್ಯಾಜಿಕ್, ಮೆಟಿಯೊರೈಟ್ ಗ್ರೇ ಮತ್ತು ಮೂನ್‌ಲೈಟ್ ವೈಟ್ ಬಣ್ಣಗಳಲ್ಲಿ ಲಭ್ಯ.

Best Mobiles in India

English summary
Xiaomi Mi 11X Pro 5G Price Cut in India: Available Starting at Rs 26,999.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+