ಶಿಯೋಮಿ 11X ಪ್ರೊ ಬೆಲೆಯಲ್ಲಿ ಭಾರೀ ಡಿಸ್ಕೌಂಟ್!..ಖರೀದಿಗೆ ಯೋಗ್ಯವೇ?
ಶಿಯೋಮಿ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ ಈಗಾಗಲೇ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಶಿಯೋಮಿಯು ಕಳೆದ ವರ್ಷ ಭಾರತದಲ್ಲಿ ಬಿಡುಗಡೆ ಮಾಡಿರುವ ಶಿಯೋಮಿ 11X ಸ್ಮಾರ್ಟ್‌ಫೋನ್ ಸರಣಿಯು ಗ್ರಾಹಕರ ಗಮನ ಸೆಳೆದಿದೆ. ಈ ಸರಣಿಯು ಎರಡು ಮಾದರಿಗಳ ಆಯ್ಕೆ ಒಳಗೊಂಡಿದ್ದು, ಅವು ಕ್ರಮವಾಗಿ ಶಿಯೋಮಿ 11X ಮತ್ತು ಶಿಯೋಮಿ 11X ಪ್ರೊ ಆಗಿವೆ. ಈ ಎರಡು ಮೊಬೈಲ್‌ಗಳ ಪೈಕಿ ಶಿಯೋಮಿ 11X ಪ್ರೊ ಖರೀದಿ ಮಾಡುವ ಗ್ರಾಹಕರಿಗೆ ಈಗ ಗುಡ್‌ನ್ಯೂಸ್ ಇದೆ.

ಶಿಯೋಮಿ ಕಂಪನಿಯ ಶಿಯೋಮಿ 11X ಪ್ರೊ ಫೋನ್ ತ್ರಿವಳಿ ಕ್ಯಾಮೆರಾ, ಫಾಸ್ಟ್ ಚಾರ್ಜಿಂಗ್, ವೇಗದ ಪ್ರೊಸೆಸರ್ ನಂತಹ ಫೀಚರ್ಸ್‌ಗಳ ಮೂಲಕ ಸದ್ದು ಮಾಡಿದೆ. ಆದ್ರೆ ಈ ಫೋನ್ ಇದೀಗ ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯ ಇದ್ದು, ಗ್ರಾಹಕರನ್ನು ಆಕರ್ಷಿಸಿದೆ. ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಶಿಯೋಮಿ 11X ಪ್ರೊ ರಿಯಾಯಿತಿ ಬೆಲೆಗೆ ಲಭ್ಯವಿದ್ದು, ಗ್ರಾಹಕರು 11,000ರೂ. ಗಳ ಡಿಸ್ಕೌಂಟ್ ಪಡೆಯಬಹುದು.

ಶಿಯೋಮಿ 11X ಪ್ರೊ ಫೋನ್ 39,999ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಅಮೆಜಾನ್‌ನಲ್ಲಿ ಸೇಲ್‌ನಲ್ಲಿ ಈ ಫೋನ್ 29,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಎಸ್‌ಬಿಐ ಬ್ಯಾಂಕ್ ಕಾರ್ಡ್ ಆಫರ್ ನಲ್ಲಿ 1,000ರೂ. ಗಳ ರಿಯಾಯಿತಿ ಸಿಗುತ್ತದೆ. ಈ ಕೊಡುಗೆ ಮೂಲಕ ಒಟ್ಟು 11,000ರೂ. ರಿಯಾಯಿತಿ ಲಭ್ಯವಾಗುತ್ತದೆ. ಹಾಗಾದರೇ ಶಿಯೋಮಿ 11X ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ಶಿಯೋಮಿ 11X ಪ್ರೊ ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿವೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿವೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಹೊಂದಿವೆ.

ಯಾವ ಪ್ರೊಸೆಸರ್ ಇದೆ
ಶಿಯೋಮಿ 11X ಪ್ರೊ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಇದೆ. ಹಾಗೆಯೇ ಈ ಫೋನ್ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ?
ಶಿಯೋಮಿ 11X ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿವೆ. ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇನ್ನು ಈ ಫೋನ್ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ.

ಬ್ಯಾಟರಿ ಪವರ್ ಎಷ್ಟು ಮತ್ತು ಕನೆಕ್ಟಿವಿಟಿ ಆಯ್ಕೆ
ಶಿಯೋಮಿ 11X ಪ್ರೊ ಫೋನ್ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಪಡೆಯುತ್ತವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿವೆ.

ಬೆಲೆ ಎಷ್ಟು?
ಭಾರತದಲ್ಲಿ ಶಿಯೋಮಿ 11X ಪ್ರೊ ಸ್ಮಾರ್ಟ್‌ಫೋನ್ 8 GB RAM + 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 39,990 ರೂ. ಆದರೆ ಇದೀಗ 29,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಎಸ್‌ಬಿಐ ಕಾರ್ಡ್‌ನೊಂದಿಗೆ 1,000ರೂ. ರಿಯಾಯಿತಿ ಲಭ್ಯ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳಲ್ಲಿ ದೊರೆಯುತ್ತದೆ.


Click it and Unblock the Notifications








