Just In
- 2 hrs ago
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- 3 hrs ago
Valentines Day ಗಿಫ್ಟ್ ಸರ್ಚ್ ಮಾಡ್ತಾ ಇದ್ದೀರಾ?..ಇಲ್ಲಿವೆ ನೋಡಿ ಅತ್ಯುತ್ತಮ ಉಡುಗೊರೆ
- 4 hrs ago
ವಾಟ್ಸಾಪ್ಗೆ ಈ ಅಚ್ಚರಿಯ ಆಯ್ಕೆ ಸೇರೋದು ಪಕ್ಕಾ! ಇದರ ಬಗ್ಗೆ ಕೂಡಲೇ ತಿಳಿದುಕೊಳ್ಳಿ!
- 4 hrs ago
ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ; ಈ ಪ್ಲ್ಯಾನ್ 28 ದಿನಕ್ಕಲ್ಲ ಬದಲಾಗಿ ಒಂದು ತಿಂಗಳ ಮಾನ್ಯತೆ!
Don't Miss
- News
ದೆಹಲಿ ಮದ್ಯ ಹಗರಣದ ಹಣವನ್ನು ಗೋವಾ ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡ ಎಎಪಿ: ಇಡಿ ಹೇಳಿಕೆಯಲ್ಲಿ ಏನಿದೆ?
- Sports
ಆತನಿಗೆ ನೀಡಿದ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ: ತ್ರಿಪಾಠಿ ಪ್ರದರ್ಶನಕ್ಕೆ ಬಂಗಾರ್ ಹರ್ಷ
- Movies
ಕಿರುತೆರೆ ಮೂಲಕ ನಟನೆಗೆ ಕಾಲಿಟ್ಟ ದೀಕ್ಷಿತ್ ಈಗ ಚಿತ್ರರಂಗದಲ್ಲಿ ಬ್ಯುಸಿ
- Finance
ಉದ್ಯೋಗಿಗಳಿಗೆ ಟೊಯೋಟಾ ಗ್ಲಾನ್ಜಾ ಗಿಫ್ಟ್ ನೀಡಿದ ರಮೇಶ್ ಮರಂದ್ ಯಾರು?
- Automobiles
ಭಾರತದಲ್ಲಿ ದುಬಾರಿ ಬೆಲೆಯ ಈ ಕಿಯಾ ಕಾರಿಗೆ ಭಾರೀ ಡಿಮ್ಯಾಂಡ್: ಇನೋವಾಗೆ ಹೆಚ್ಚಿದ ಪೈಪೋಟಿ
- Lifestyle
ಸುಖಿ ಸಂಸಾರ ಅಂತ ಇದ್ದರೂ ಗಂಡ ಅನೈತಿಕ ಸಂಬಂಧ ಬೆಳೆಸುವುದೇಕೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು ಶಿಯೋಮಿ 'ಮಿ ಬ್ಯಾಂಡ್ 4' ಫಸ್ಟ್ ಸೇಲ್!.ಖರೀದಿಸುವ ಮುನ್ನ ಗಮನಿಸಿ!
ಸದ್ಯ ಸ್ಮಾರ್ಟ್ ಬ್ಯಾಂಡ್ ವಲಯದಲ್ಲಿ ಭಾರೀ ಕ್ರೇಜ್ ಮೂಡಿಸಿರುವ ಶಿಯೋಮಿಯ ಮಿ ಬ್ಯಾಂಡ್ 4 ಡಿವೈಸ್ ಇದೇ ಸೆಪ್ಟೆಂಬರ್ 17ರಂದು ಭಾರತದಲ್ಲಿ ಬಿಡುಗಡೆ ಆಗಿದ್ದು, ಇಂದು (ಸೆ.19) ಮೊದಲ ಸೇಲ್ ಆರಂಭಿಸಲಿದೆ. ಅಮೆಜಾನ್ ಮತ್ತು ಮಿ ಹೋಮ್ ಸ್ಟೋರ್‌ಗಳಲ್ಲಿ ಮಧ್ಯಾಹ್ನ 12ಗಂಟೆಯಿಂದ ಖರೀದಿಗೆ ಲಭ್ಯವಾಗಲಿರುವ ಈ ಡಿವೈಸ್ ಕಲರ್ ಡಿಸ್‌ಪ್ಲೇ ಮತ್ತು ಬಿಗ್ ಬ್ಯಾಟರಿ ಲೈಫ್ ಫೀಚರ್ಸ್‌ಗಳಿಂದ ಈಗಾಗಲೇ ಫಿಟ್ನೆಸ್ ಪ್ರಿಯರ್ ಮನಸನ್ನು ಗೆದ್ದಿದೆ.

ಹೌದು, ಶಿಯೋಮಿಯ ಮಿ ಬ್ಯಾಂಡ್ 4 ಡಿವೈಸ್, ಕಂಪನಿಯ ಮಿ ಬ್ಯಾಂಡ್ 3 ಡಿವೈಸ್‌ಗಿಂತ ಸಾಕಷ್ಟು ಅಪ್‌ಗ್ರೇಡ್ ಫೀಚರ್ಸ್‌ಗಳನ್ನು ಹೊಂದಿದೆ. ಮುಖ್ಯವಾಗಿ ಬ್ಯಾಟರಿ ಗಮನ ಸೆಳೆದಿದ್ದು, ಒಮ್ಮೆ ಪೂರ್ಣ ಚಾರ್ಜ್ ಮಾಡಿದರೇ ಸುಮಾರು 20 ದಿನಗಳ ವರೆಗೂ ಬಾಳಿಕೆ ಬರಲಿದೆ. ಜೊತೆಗೆ ಐದು ಭಿನ್ನ ಸ್ವಿಮ್ಮಿಂಗ್ ಸ್ಟೈಲ್ ಟ್ರಾಕಿಂಗ್ ಆಯ್ಕೆಗಳನ್ನು ನೀಡಲಾಗಿದೆ. ನಿವೇನಾದರೂ ಶಿಯೋಮಿ 'ಮಿ ಬ್ಯಾಂಡ್ 4' ಖರೀದಿಸುವುದಿದ್ದರೇ ಅದರ ಫೀಚರ್ಸ್‌ಗಳನ್ನು ಒಮ್ಮೆ ಓದಿರಿ.

ಫಿಟ್‌ನೆಸ್ ಆಯ್ಕೆಗಳು
ಶಿಯೋಮಿಯ ಮಿ ಬ್ಯಾಂಡ್ 4, ಅತ್ಯುತ್ತಮ ಫಿಟ್ನೆಸ್ ಡಿವೈಸ್ ಆಗಿದ್ದು, 'ಹಾರ್ಟ್‌ರೇಟ್ ಮಾನಿಟರಿಂಗ್' ಆಯ್ಕೆಯನ್ನು ಒಳಗೊಂಡಿದೆ. ನಿರಂತರ ಹೃದಯ ಬಡಿತದ ಕುರಿತು ಮಾಹಿತಿ ಒದಗಿಸುತ್ತದೆ. ಹಾಗೆಯೇ ಫೋಟೊಥೆಸ್ಮೊಗ್ರಾಫಿ (PPG) ಎಂಬ ಹೊಸ ಆಯ್ಕೆಯನ್ನು ಹೊಂದಿದ್ದು, ಇದು ರಕ್ತದ ಕುರಿತು ಕೇಲವು ಸೂಕ್ಷ್ಮ ಅಂಶಗಳನ್ನು ಗ್ರಹಿಸಿ ಮಾಹಿತಿಯನ್ನು ನೀಡಲಿದೆ.

ಕಲರ್ ಡಿಸ್‌ಪ್ಲೇ
ಈ ಮಿ ಬ್ಯಾಂಡ್ 4, ಡಿವೈಸ್ 240 x 120 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 0.95 ಇಂಚಿನ AMOLED ಕಲರ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಶೇ. 39.9%ರಷ್ಟು ದೊಡ್ಡ ಡಿಸ್‌ಪ್ಲೇ ಆಗಿದ್ದು, ಸಂಪೂರ್ಣ ಕಲರ್ ಡಿಸ್‌ಪ್ಲೇ ಮಾದರಿಯನ್ನು ಪಡೆದಿದೆ. 2.5D ಟೆಂಪರ್ಡ್ ಗ್ಲಾಸ್ ರಚನೆಯನ್ನು ಸಹ ಹೊಂದಿದ್ದು, ಸ್ಕ್ರಾಚ್ ಮುಕ್ತವಾಗಿದೆ. ಬೆಳಕಿನಲ್ಲಿಯೂ ಡಿಸ್‌ಪ್ಲೇ ಸ್ಪಷ್ಟವಾಗಿ ಕಾಣಿಸಲಿದೆ.

ಸೆನ್ಸಾರ್ ಹೇಗಿದೆ
ಮಿ ಬ್ಯಾಂಡ್ 4 ಸೆನ್ಸಾರ್ ಸಾಮರ್ಥ್ಯದ ಗ್ರಹಿಕೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಡಿವೈಸ್ ವಿವಿಧ ಬಗೆಯ ಸ್ವಿಮ್ಮಿಂಗ್ ಸ್ಟ್ರೋಕ್‌ಗಳನ್ನು ಗ್ರಹಿಸುತ್ತದೆ. ಅವುಗಳಲ್ಲಿ ಫ್ರಿ-ಸ್ಟೈಲ್, ಬ್ಯಾಕ್‌ಸ್ಟ್ರೋಕ್, ಬಟರ್‌ಪ್ಲೈ ಸ್ಟ್ರೋಕ್ ಮತ್ತು ಮೆಡ್ಲಿ (Medley) ಸ್ವಿಮ್ಮಿಂಗ್ ಸ್ಟೈಲ್‌ಗಳು ಸೇರಿವೆ. ಹಾಗೆಯೇ ರನ್ನಿಂಗ್, ಔಟ್‌ಡೋರ್ ರನ್ನಿಂಗ್, ಎಕ್ಸಸೈಜ್, ಸೈಕ್ಲಿಂಗ್, ವಾಕಿಂಗ್ ಚಟುವಟಿಕೆಗಳನ್ನು ಟ್ರಾಕ್ ಮಾಡಲಿದೆ.

ಬ್ಯಾಟರಿ ಪವರ್
ಶಿಯೋಮಿ ಮಿ ಬ್ಯಾಂಡ್ 4' ಡಿವೈಸ್ 135mAh ಸಾಮರ್ಥ್ಯದ ಬಿಗ್ ಬ್ಯಾಟರಿ ಶಕ್ತಿಯನ್ನು ಹೊಂದಿದ್ದು, ಒಮ್ಮೆ ಚಾರ್ಜ್ ಮಾಡಿದರೇ ಸುಮಾರು 20 ದಿನಗಳ ವರೆಗೂ ಬಾಳಿಕೆ ಬರಲಿದೆ. ಇದರೊಂದಿಗೆ ಅತ್ಯುತ್ತಮ ಚಾರ್ಜರ್ ಸೌಲಭ್ಯವನ್ನು ನೀಡಲಾಗಿದೆ. ಶಿಯೋಮಿ 'ಮಿ 3' ಸ್ಮಾರ್ಟ್‌ಬ್ಯಾಂಡ್ 110mAh ಬ್ಯಾಟರಿ ಪವರ್ ಅನ್ನು ನೀಡಲಾಗಿತ್ತು. ಮಿ 4 ಸ್ಮಾರ್ಟ್‌ಬ್ಯಾಂಡ್‌ನಲ್ಲಿ ಬ್ಯಾಟರಿ ಹೆಚ್ಚಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಶಿಯೋಮಿಯ 'ಮಿ ಬ್ಯಾಂಡ್ 4' ಬೆಲೆಯು 2,299ರೂ. ಆಗಿದ್ದು, ಈ ಡಿವೈಸ್ ಇಂದು (ಸೆಪ್ಟೆಂಬರ್ 19) ಮಧ್ಯಾಹ್ನ 12ಗಂಟೆಯಿಂದ ಫಸ್ಟ್ ಸೇಲ್ ಆರಂಭವಾಗಲಿದೆ. ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣ ಮತ್ತು ಅಧಿಕೃತ ಶಿಯೋಮಿ ವೆಬ್‌ಸೈಟ್ ಮತ್ತು ಉಳಿದಂತೆ 'ಮಿ ಹೋಮ್' ಸ್ಟೋರ್‌ಗಳಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470