ಅಚ್ಚರಿ ನೀಡಿದ ಶಿಯೋಮಿ: ಎಂಐ ಮ್ಯಾಕ್ಸ್ ಮತ್ತು ಎಂಐ ನೋಟ್ ಸರಣಿ ಸ್ಥಗಿತ!

|

ಮೊಬೈಲ್ ಮಾರುಕಟ್ಟೆಯಲ್ಲಿ ಅಷ್ಟೇನು ಸದ್ದು ಮಾಡದ ಎಂಐ ಸರಣಿಯ ಎಂಐ ಮ್ಯಾಕ್ಸ್ ಮತ್ತು ಎಂಐ ನೋಟ್ ಸರಣಿಯನ್ನು ಸ್ಥಗಿತಗೊಳಿಸಲು ಶಿಯೋಮಿ ನಿರ್ಧರಿಸಿದೆ. ಎಂಐ ಮ್ಯಾಕ್ಸ್ ಮತ್ತು ಎಂಐ ನೋಟ್ ಸರಣಿಯಲ್ಲಿ ಹೊಸ ಫೋನ್ ಬಿಡುಗಡೆಗೊಳಿಸುವ ಯಾವುದೇ ಯೋಜನೆ ಈ ವರ್ಷ ಇಲ್ಲ ಎಂದು ಶಿಯೋಮಿ ಕಂಪೆನಿಯ ಸಿಇಒ ಲೀ ಜುನ್ ಅವರು ತಿಳಿಸಿದ್ದಾರೆ.

ಅಚ್ಚರಿ ನೀಡಿದ ಶಿಯೋಮಿ: ಎಂಐ ಮ್ಯಾಕ್ಸ್ ಮತ್ತು ಎಂಐ ನೋಟ್ ಸರಣಿ ಸ್ಥಗಿತ!

ಚೀನಾದ ಜನಪ್ರಿಯ ವೆಬ್‌ ತಾಣ ವೇಬೋದಲ್ಲಿ ಈ ಬಗ್ಗೆ ವರದಿಯಾಗಿದ್ದು, ಲೀ ಜುನ್ ಅವರು ಎಂಐ ಮ್ಯಾಕ್ಸ್ ಮತ್ತು ಎಂಐ ನೋಟ್ ಸರಣಿಯಲ್ಲಿ ಹೊಸ ಫೋನ್ ಬಿಡುಗಡೆಗೊಳಿಸುವ ಯಾವುದೇ ಯೋಜನೆ ಈ ವರ್ಷ ಇಲ್ಲ ಎಂದಿರುವುದನ್ನು ಪ್ರಕಟಿಸಿದೆ. ಹಾಗಾಗಿ, ಚೀನಾ ಸೇರಿದಂತೆ ಭಾರತದಲ್ಲಿಯೂ ಕೂಡ ಎಂಐ ಮ್ಯಾಕ್ಸ್ ಮತ್ತು ಎಂಐ ನೋಟ್ ಇನ್ನು ಮರೆಯಾಗಲಿವೆ.

ಇವುಗಳ ಬದಲಾಗಿ ರೆಡ್ಮಿ, ಎಂಐ ಮಿಕ್ಸ್ ಮತ್ತು ಎಂಐ 9 ಮತ್ತು CC ಸರಣಿ ಫೋನ್ ಉತ್ಪಾದನೆ ಮತ್ತು ಬಿಡುಗಡೆ ಕುರಿತು ಹೆಚ್ಚಿನ ಗಮನ ಹರಿಸುವುದಾಗಿ ಹೇಳಿದ್ದಾರೆ. ಇನ್ನು ಹೊಸ ರೆಡ್ಮಿ ಕೆ20 ಫೋನ್‌ ನೋಟ್ ಸರಣಿಯ ಉತ್ತರಾಧಿಕಾರಿ ಎನ್ನಲಾಗುತ್ತಿದ್ದು, ಹಾಗಾದರೆ, ಮುಂದಿನ ತಿಂಗಳು ಭಾರತಕ್ಕೆ ಕಾಲಿಡುತ್ತಿರುವ ರೆಡ್ಮಿ ಕೆ20 ಸ್ಮಾರ್ಟ್‌ಫೋನ್ ಹೇಗಿದೆ ನೋಡೋಣ ಬನ್ನಿ.

6.39-ಇಂಚಿನ AMOLED ಡಿಸ್‌ಪ್ಲೇ

6.39-ಇಂಚಿನ AMOLED ಡಿಸ್‌ಪ್ಲೇ

ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್‌ಗಳ ಎಫ್‌ಹೆಚ್‌ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್‌ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್

ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್

ರೆಡ್‌ಮಿ ಕೆ20 ಪ್ರೊ ರೂಪಾಂತದ ಸ್ಮಾರ್ಟ್‌ಫೋನ್ 8GB RAM ನೋಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.

4,000mAh ಬ್ಯಾಟರಿ

4,000mAh ಬ್ಯಾಟರಿ

ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ. ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.

ಪಾಪ್‌ಅಪ್ ಸೆಲ್ಫೀ ಕ್ಯಾಮೆರಾ!

ಪಾಪ್‌ಅಪ್ ಸೆಲ್ಫೀ ಕ್ಯಾಮೆರಾ!

ರೆಡ್ಮಿ ಕೆ20 ಪ್ರೊನಲ್ಲಿ (ಪೊಕೊ ಫೋನ್ 2 ) 32 ಎಂಪಿ ಪಾಪ್-ಅಪ್ ಸೆಲ್ಫೀ ಕ್ಯಾಮರಾ ವ್ಯವಸ್ಥೆ ಇರುವ ವದಂತಿಗಳು ಖಚಿತವಾಗಿದೆ. ಫೋನಿನಲ್ಲಿ ಟ್ರಿಪಲ್ ಲೆನ್ಸ್ ಸೆಟಪ್ ಹಿಂಭಾಗದಲ್ಲಿದ್ದು 48ಎಂಪಿ ಪ್ರೈಮರಿ ಸೆನ್ಸರ್, 8ಎಂಪಿ ಡೆಪ್ತ್ ಸೆನ್ಸರ್ ಹಾಗೂ ವೈಡ್ ಆಂಗಲ್‌ಗೆ ಸಹಕಾರಿಯಾಗುವಂತಹ ಕ್ಯಾಮೆರಾ ಅಳವಡಿಸಲಾಗಿದೆ. ಸುಧಾರಿತ ಕ್ಯಾಮೆರಾ ತಂತ್ರಜ್ಞಾನಗಳು ಇರಲಿವೆ.

ಇತರೆ ಎಲ್ಲಾ ಫೀಚರ್ಸ್

ಇತರೆ ಎಲ್ಲಾ ಫೀಚರ್ಸ್

ರೆಡ್ಮಿ ಕೆ20 ಪ್ರೊ ಫೋನಿನಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.

ಬೆಲೆಗಳು ಎಷ್ಟು?

ಬೆಲೆಗಳು ಎಷ್ಟು?

ರೆಡ್‌ಮಿ ಕೆ ಪ್ರೊ ಮೂರು ಮಾದರಿಗಳಲ್ಲಿ ಲಭ್ಯವಿದ್ದು, ಬೆಲೆಗಳು ಇಂತಿವೆ. 6 ಜಿಬಿ RAM + 128 ಜಿಬಿ ಮೆಮೊರಿ- 2,599 ಯುವಾನ್ (ಅಂದಾಜು ರೂ. 26,000), 8 ಜಿಬಿ RAM + 128 ಜಿಬಿ ಮೆಮೊರಿ- 2,799 ಯುವಾನ್ (ಅಂದಾಜು ರೂ. ರೂ. 28,000), ಹಾಗೂ 8 ಜಿಬಿ RAM + 256 ಜಿಬಿ ಮೆಮೊರಿ- 2,999 ಯುವಾನ್ (ಸುಮಾರು ರೂ 30,000) ರೂ.ಗಳಾಗಿವೆ.

Best Mobiles in India

English summary
Chinese smartphone manufacturer Xiaomi's Chief Executive Officer Lei Jun has revealed that the company currently has no plans to launch new phones in the Mi Max and Mi Note lineups this year. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X