Subscribe to Gizbot

ಒಂದು ಟ್ವಿಟ್‌ನಲ್ಲಿ ಇಡೀ ವಿಶ್ವವನ್ನೆ ಬೆಚ್ಚಿಬೀಳಿಸಿತು ಶಿಯೋಮಿ!!.ಮೊಬೈಲ್ ಮಾರುಕಟ್ಟೆಗೆ ಬಿಗ್‌ಶಾಕ್!!

Written By:

ಬಾರ್ಸಿಲೋನಾದಲ್ಲಿ ನಡೆಯುತ್ತಿರುವ 2018ನೇ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಶಿಯೋಮಿ ಒಂದು ಟ್ವಿಟ್ ಮೂಲಕ ವಿಶ್ವದ ದಿಗ್ಗಜ ಸ್ಮಾರ್ಟ್‌ಫೋನ್‌ ಕಂಪೆನಿಗಳಿಗೆ ಬೆಚ್ಚಿಬೀಳಿಸಿದೆ.! "ಶೀಯೋಮಿ ಮೈ ಮಿಕ್ಸ್ 2ಎಸ್'' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಬಗ್ಗೆ ಶಿಯೋಮಿ ಟ್ವಿಟ್ ಮಾಡಿ ಮಾಹಿತಿ ಬಿಡುಗಡೆ ಮಾಡಿದೆ.!!

ಹೌದು, ಸ್ಯಾಮ್‌ಸಂಗ್ ಗ್ಯಾಲಾಕ್ಸಿ ಎಸ್‌9 ಮತ್ತು ನೋಕಿಯಾ ಕಂಪೆನಿಗಳಿಗೆ ಟಾಂಗ್ ನೀಡಲು ಶಿಯೋಮಿ ಕಂಪೆನಿ ಶೀಯೋಮಿ ಮೈ ಮಿಕ್ಸ್ 2ಎಸ್ ಸ್ಮಾರ್ಟ್‌ಫೋನ್ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಿದೆ. ಮುಂದಿನ ತಿಂಗಳು ಅಂದರೆ ಮಾರ್ಚ್ 27 ನೇ ತಾರೀಖು 'ಶಿಯೋಮಿ ಮೈ ಮಿಕ್ಸ್ 2ಎಸ್' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.!!

ಈಗಾಗಲೇ ಭಾರೀ ಕುತೋಹಲ ಹುಟ್ಟಿಸಿರುವ ಶಿಯೋಮಿ ಮೈ ಮಿಕ್ಸ್ 2ಎಸ್' ಸ್ಮಾರ್ಟ್‌ಫೋನ್ ಬಿಡುಗಡೆಯಾಗುವ ದಿನಾಂಕ ಪ್ರಕಟವಾದ ನಂತರ ಇತರೆ ಕಂಪೆನಿಗಳಿಗೆ ಭಯ ಶುರುವಾಗಿದೆ.! ಹಾಗಾದರೆ, ಆಪಲ್ ಎಕ್ಸ್ ವಿನ್ಯಾಸ, ಕ್ವಾಲ್ಕಂ ಸ್ನ್ಯಾಪ್‌ಡ್ರಾಗನ್ 845 SOC ಪ್ರೊಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯಿರಿ.!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
403PPi ಡೆನ್‌ಸಿಟಿ ಡಿಸ್‌ಪ್ಲೇ !!

403PPi ಡೆನ್‌ಸಿಟಿ ಡಿಸ್‌ಪ್ಲೇ !!

5.99-ಇಂಚಿನ ಬೆಜೆಲ್ ಡಿಸ್‌ಪ್ಲೇ 1080x2160 ಪಿಕ್ಸೆಲ್‌ ಮೂಲಕ ಶಿಯೋಮಿ ಮೈ ಮಿಕ್ಸ್ 2 ಹೊರಬಂದಿದ್ದು, 403PPi ಡೆನ್‌ಸಿಟಿ ವೈಶಿಷ್ಟ್ಯ ಹೊಂದಿದೆ.!! 151.8x75.5x7.7 ಮಿಮೀ ಅಳತೆ, ಮತ್ತು 185 ಗ್ರಾಂ ತೂಕವಿರುವ ಮೈ ಮಿಕ್ಸ್ 2 ಆಪಲ್ ಮತ್ತು ಸ್ಯಾಮ್‌ಸಂಗ್‌ಗೆ ನೇರ ಸೆಡ್ಡು ಹೊಡೆದಿದೆ.!!

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಸೋನಿ IMX386 ಸೆನ್ಸಾರ್, 1.25-ಮೈಕ್ರಾನ್ ಪಿಕ್ಸೆಲ್ ಹಾಗೂ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್, 5-ಪೀಸ್ ಲೆನ್ಸ್ ಮತ್ತು ಎಫ್ / 2.0 ಅಪರ್ಚರ್‌ನೊಂದಿದಗೆ 18k ಚಿನ್ನ ಲೇಪಿತ ಕ್ಯಾಮೆರಾ ರಿಂಗ್ ಮೂಲಕ ಶಿಯೋಮಿ ಮೈ ಮಿಕ್ಸ್ 2 ರಿಯರ್ ಕ್ಯಾಮೆರಾ ಹೊರಬಂದಿದೆ.! ರಿಯರ್ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸಾಮರ್ಥ್ಯ ಹೊಂದಿದ್ದರೆ, 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಫೋನ್‌ನಲ್ಲಿದೆ.!!

ಪ್ರೊಸೆಸರ್ ಮತ್ತು ಕನೆಕ್ಟಿವಿಟಿ!!

ಪ್ರೊಸೆಸರ್ ಮತ್ತು ಕನೆಕ್ಟಿವಿಟಿ!!

ಶಿಯೋಮಿ ಮೈ ಮಿಕ್ಸ್ 2 ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ನ ಸ್ನ್ಯಾಪ್‌ಡ್ರಾಗನ್ 835 SoC ಪ್ರೊಸೆಸರ್ ಹಾಗೂ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ 4ಜಿ ಎಲ್‌ಟಿಇ, ಡ್ಯೂಯಲ್-ಬ್ಯಾಂಡ್ (2.4GHz ಮತ್ತು 5GHz), Wi-Fi, ಜಿಪಿಎಸ್ / ಎ-ಜಿಪಿಎಸ್, ಬ್ಲೂಟೂತ್ ವಿ 5.0, ಮತ್ತು ಟೈಪ್ ಸಿ ಯುಎಸ್‌ಬಿ ಎಲ್ಲವಕ್ಕೂ ಕನೆಕ್ಟಿವಿಟಿ ಹೊಂದಿದೆ.!!

ಇತರೆ ಏನೆಲ್ಲಾ ಫೀಚರ್ಸ್?

ಇತರೆ ಏನೆಲ್ಲಾ ಫೀಚರ್ಸ್?

ವಿಶ್ವದ ಟಾಪ್‌ ಕಂಪೆನಿಗಳಿಗೂ ಸೆಡ್ಡು ಹೊಡೆಯುವಂತಹ ಸಂವೇದಕಗಳಿಂದ ಮೈ ಮಿಕ್ಸ್ 2 ಹೊರಬಂದಿದೆ.! ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬಾರೋಮೀಟರ್, ಡಿಜಿಟಲ್ ದಿಕ್ಸೂಚಿ, ಜ್ಯೋರೋಸ್ಕೋಪ್ ಮತ್ತು ಅಲ್ಟ್ರಾಸಾನಿಕ್ ಪೀಚರ್ಸ್‌ಗಳು ಸ್ಮಾರ್ಟ್‌ಫೋನ್‌ನಲ್ಲಿವೆ.ಮತ್ತು 3400mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ.!!

Xiaomi Redmi Note 5 Pro ಮಾರಾಟದ ದಿನಾಂಕ ಫಿಕ್ಸ್!! ಫುಲ್ ಡೀಟೆಲ್ಸ್!!
ಶಿಯೋಮಿ ಮೈ ಮಿಕ್ಸ್ 2 ಬೆಲೆ.!

ಶಿಯೋಮಿ ಮೈ ಮಿಕ್ಸ್ 2 ಬೆಲೆ.!

ಇಷ್ಟೆಲ್ಲಾ ಫೀಚರ್ಸ್ ಹೊಂದಿರುವ ಶಿಯೋಮಿ ಕಂಪೆನಿ ಈ ಹೈ ಎಂಡ್ ಫೋನ್ ಶಿಯೋಮಿಮೈ ಮಿಕ್ಸ್ 2 6GB RAM ಹಾಗೂ 128GB ವೆರಿಯಂಟ್ ಸ್ಮಾರ್ಟ್‌ಫೊನ್ ಬೆಲೆ ಚೀನಾದಲ್ಲಿ 4000 CNYಗೆ ಬಿಡುಗಡೆಯಾಗಲಿದೆಎನ್ನಲಾಗಿದೆ. ಅಂದರೆ ಭಾರತದಲ್ಲಿ 39 ಸಾವಿರ ರೂಪಾಯಿಗಳ ಆಸುಪಾಸಿನಲ್ಲಿರಲಿದೆ ಎನ್ನಬಹುದು.!!

ಓದಿರಿ:ನೋಕಿಯಾದ ಮೊದಲ 'ಆಂಡ್ರಾಯ್ಡ್ ಗೊ' ಸ್ಮಾರ್ಟ್‌ಫೋನ್ "ನೋಕಿಯಾ 1" ರಿಲೀಸ್!!..ಬೆಲೆ ಎಷ್ಟು ?

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Xiaomi Mi Mix 2S to launch on March 27, its Antutu score officially revealed.to know more visit to kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot