ಶಿಯೋಮಿ ಮಿಕ್ಸ್ ಫೋಲ್ಡ್ 2 ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಮೊಬೈಲ್ ಮಾರುಕಟ್ಟೆಯಲ್ಲಿ ಶಿಯೋಮಿ ಬ್ರ್ಯಾಂಡ್ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಒಂದೆನಿಸಿಕೊಂಡಿದೆ. ಸದ್ಯ ಇದೀಗ ಶೀಯೋಮಿ ಕಂಪೆನಿ ತನ್ನ ಬಹುನಿರೀಕ್ಷಿತ ಫೋಲ್ಡಬಲ್ ಫೋನ್ ಶಿಯೋಮಿ ಮಿಕ್ಸ್ ಫೋಲ್ಡ್ 2 ಅನ್ನು ಲಾಂಚ್ ಮಾಡಿದೆ. ಇದು ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.

ಹೌದು, ಶಿಯೋಮಿ ಕಂಪೆನಿ ಹೊಸ ಶಿಯೋಮಿ ಮಿಕ್ಸ್ ಫೋಲ್ಡ್ 2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಹೊಸ ಫೋಲ್ಡಬಲ್ ಫೋನ್ 120Hz ರಿಫ್ರೆಶ್ ರೇಟ್ ಸಾಮರ್ಥ್ಯದ 6.56 ಇಂಚಿನ E5 AMOLED ಮೇನ್ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಹೈ ಬ್ರೈಟ್‌ನೆಸ್ ಮೋಡ್‌ನಲ್ಲಿ 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಏನೆಲ್ಲಾ ವಿಶೇಷತೆ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ ಮಿಕ್ಸ್ ಫೋಲ್ಡ್ 2 ಸ್ಮಾರ್ಟ್‌ಫೋನ್ 8.02-ಇಂಚಿನ LTPO 2.0 ಫೋಲ್ಡಿಂಗ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್, DCI-P3 ಕಲರ್ ಗ್ಯಾಮಟ್ ಮತ್ತು 2,160x1,914 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಈ ಡಿಸ್‌ಪ್ಲೇ 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದು 6.56-ಇಂಚಿನ E5 ಅಮೋಲೆಡ್ ಔಟರ್ ಡಿಸ್‌ಪ್ಲೇಯನ್ನು ಕೂಡ ಹೊಂದಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12-ಆಧಾರಿತ MIUI ಫೋಲ್ಡ್ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 1TB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಶಿಯೋಮಿ ಕಂಪೆನಿ ಸ್ವಯಂ-ಅಭಿವೃದ್ಧಿಪಡಿಸಿದ 'ಮೈಕ್ರೋ ವಾಟರ್‌ಡ್ರಾಪ್ ಹಿಂಜ್' ಅನ್ನು ಬಳಸುತ್ತದೆ.

ಕ್ಯಾಮೆರಾ ಹೇಗಿದೆ?
ಶಿಯೋಮಿ ಮಿಕ್ಸ್ ಫೋಲ್ಡ್ 2 ಲೈಕಾ-ಬ್ರಾಂಡೆಡ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಕೂಡ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ ಮಿಕ್ಸ್ ಫೋಲ್ಡ್ 2 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.2, NFC, ಡ್ಯುಯಲ್-ಬ್ಯಾಂಡ್ Wi-Fi, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ ಮಿಕ್ಸ್ ಫೋಲ್ಡ್ 2 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 8,999 (ಅಂದಾಜು 1,06,200ರೂ)ಬೆಲೆ ಹೊಂದಿದೆ. ಇನ್ನು 12GB + 512GB ಸ್ಟೋರೇಜ್ ಆಯ್ಕೆಯ ಮಧ್ಯ-ಶ್ರೇಣಿಯ ರೂಪಾಂತರವು CNY 9,999 (ಅಂದಾಜು 1,18,000ರೂ) ಬೆಲೆ ಪಡೆದುಕೊಂಡಿದೆ. ಇದಲ್ಲದೆ 12GB + 1TB ಸಂಗ್ರಹಣೆ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಬೆಲೆ CNY 11,999 (ಅಂದಾಜು 1,41,600ರೂ) ಆಗಿದೆ. ಇನ್ನು ಈ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಪ್ರಸ್ತುತ ಶಿಯೋಮಿ ಆನ್‌ಲೈನ್ ಸ್ಟೋರ್ ಮೂಲಕ ಚೀನಾದಲ್ಲಿ ಲಭ್ಯವಾಗಲಿದೆ.


Click it and Unblock the Notifications








