ಕಡಿಮೆ ಬೆಲೆಯಲ್ಲಿ ರೆಡ್ಮಿ ಸ್ಮಾರ್ಟ್‌ಫೋನ್ ಖರೀದಿಗೆ ಇದುವೇ ಬೆಸ್ಟ್ ಟೈಮ್!
ರೆಡ್ಮಿ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಬಜೆಟ್ ದರದಲ್ಲಿ ಕಾಣಿಸಿಕೊಂಡಿರುವ ರೆಡ್ಮಿ 10 ಪವರ್ ಮೊಬೈಲ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇದೀಗ ಫೋನ್ ಬೊಂಬಾಟ್ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಅಗ್ಗದ ಬೆಲಗೆ ಫೋನ್ ಖರೀದಿಸುವವರಿಗೆ ಗುಡ್‌ನ್ಯೂಸ್ ಎನಿಸಿದೆ.
ಹೌದು, ದಿಗ್ಗಜ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ರೆಡ್ಮಿ 10 ಪವರ್ ಫೋನ್ ಬೆಲೆಯಲ್ಲಿ ಶೇ. 34% ರಷ್ಟು ಆಕರ್ಷಕ ರಿಯಾಯಿತಿ ಲಭ್ಯ ಆಗಿದೆ. 8 GB RAM + 128GB ಸ್ಟೋರೇಜ್ ವೇರಿಯಂಟ್ 18,999ರೂ. ಗಳ ಪ್ರೈಸ್‌ಟ್ಯಾಗ್ ಅನ್ನು ಪಡೆದಿದ್ದು, ಆದರೆ ಇದೀಗ ಅಮೆಜಾನ್ ರಿಯಾಯಿತಿಯಲ್ಲಿ ಈ ಮೊಬೈಲ್ 12,499ರೂ. ಗಳಿಗೆ ಖರೀದಿಗೆ ಲಭ್ಯ ಇದೆ.

ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ರೆಡ್ಮಿ 10 ಪವರ್ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ವಿನ್ಯಾಸ ಹೇಗಿದೆ
ರೆಡ್ಮಿ 10 ಪವರ್ ಫೋನ್ 6.7 ಇಂಚಿನ HD+ IPS LCD ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಇದರ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ ಹೇಗಿದೆ
ರೆಡ್ಮಿ 10 ಪವರ್ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ನಲ್ಲಿ MIUI 13 ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಇದರೊಂದಿಗೆ ಈ ಫೋನ್ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಕೂಡಾ ಒಳಗೊಂಡಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ರೆಡ್ಮಿ 10 ಪವರ್ ಮೊಬೈಲ್ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಜೊತೆಗೆ f/2.4 ಅಪರ್ಚರ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದು 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಇದು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ
ರೆಡ್ಮಿ 10 ಪವರ್ ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಪಡೆದುಕೊಂಡಿದೆ. ಇನ್ನು ಈ ಫೋನ್ ರಿಯರ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.


Click it and Unblock the Notifications








