ರೆಡ್ಮಿ 10X ಸ್ಮಾರ್ಟ್‌ಫೋನ್‌ ಲಾಂಚ್‌ಗೆ ಸಜ್ಜಾಗುತ್ತಿದೆ ಶಿಯೋಮಿ!

|

ಜನಪ್ರಿಯ ಮೊಬೈಲ್ ಕಂಪನಿಗಳಲ್ಲಿ ಒಂದಾದ ಚೀನಾ ಮೂಲದ ಶಿಯೋಮಿ ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ ಪರಿಚಯಿಸಿ ಮಾರುಕಟ್ಟೆಯಲ್ಲಿ ಗಟ್ಟಿ ಸ್ಥಾನ ಕಂಡುಕೊಂಡಿದೆ. ಈ ಸಂಸ್ಥೆಯು ಇತ್ತೀಚಿಗಷ್ಟೆ ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಮಾಡಿದ್ದು, ಈ ಸರಣಿಯು ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಆದ್ರೆ ಅದರ ಬೆನ್ನಲೇ ಇದೀಗ ಮತ್ತೊಂದು ನೂತನ ಸ್ಮಾರ್ಟ್‌ಫೋನ್ ಲಾಂಚ್ ಮಾಡುವ ಸೂಚನೆ ಬಹಿರಂಗವಾಗಿದೆ.

ರೆಡ್ಮಿ 10X

ಹೌದು, ಶಿಯೋಮಿ ಇದೀಗ ರೆಡ್ಮಿ 10X ಹೆಸರಿನ ದೈತ್ಯ ಸ್ಮಾರ್ಟ್‌ಫೋನ್‌ವೊಂದನ್ನು ತಯಾರಿಕೆಯಲ್ಲಿದೆ ಎಂಬುದಾಗಿ ಚೀನಾದಲ್ಲಿನ ಟಿಯಾನಿ ದೂರಸಂಪರ್ಕದ ವೆಬ್‌ಸೈಟ್‌ನಲ್ಲಿ ಮಾಹಿತಿ ತಿಳಿಸಲಾಗಿದೆ. ರೆಡ್ಮಿ 10X ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G85 ಚಿಪ್‌ಸೆಟ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಗಳು ಇವೆ. ಹಾಗೂ ಈ ಫೋನ್ ಬಹುತೇಕ ರೆಡ್ಮಿ 9 ಸರಣಿ ಫೋನ್‌ ಡಿಸೈನ್‌ ಹೋಲುವಂತೆ ಕಾಣಿಸುತ್ತವೆ ಎನ್ನಲಾಗಿದೆ. ಲೀಕ್ ಮಾಹಿತಿ ಪ್ರಕಾರ ಬರಲಿರುವ ರೆಡ್ಮಿ 10X ಫೋನ್‌ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ಶಿಯೋಮಿ ರೆಡ್ಮಿ 10X ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಹಾಗೆಯೇ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ IPS LCD ಮಾದರಿಯ ಡಿಸ್‌ಪ್ಲೇ ಇರಲಿದೆ. ಗೊರಿಲ್ಲಾ ಗ್ಲಾಸ್‌ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಶಿಯೋಮಿ ರೆಡ್ಮಿ 10X ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G85 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಹಾಗೂ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಇರಲಿದೆ. ಎಷ್ಟು ವೇರಿಯಂಟ್‌ ಮಾದರಿಗಳಿ ಇರಲಿವೆ ಎಂಬುದು ಬಹಿರಂಗವಾಗಿಲ್ಲ ಆದರೆ ಬೇಸ್‌ ವೇರಿಯಂಟ್‌ 6GB RAM ಮತ್ತು 128GB ಸ್ಟೋರೇಜ್ ಹೊಂದಿರಲಿದೆ ಎನ್ನಲಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಶಿಯೋಮಿ ರೆಡ್ಮಿ 10X ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹೊಂದಿರಲಿದೆ. ಮುಖ್ಯ ಕ್ಯಾಮೆರಾವು 48MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದ್ದು, ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್ ಹೊಂದಿರಲಿದೆ. ಉಳಿದಂತೆ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2MP ಸೆನ್ಸಾರ್ ಪಡೆದಿರಲಿವೆ. ಜೊತೆಗೆ 13MP ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ.

ಬ್ಯಾಟರಿ ಲೈಫ್‌

ಬ್ಯಾಟರಿ ಲೈಫ್‌

ಶಿಯೋಮಿ ರೆಡ್ಮಿ 10X ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದರೊಂದಿಗೆ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿರುವ ಬಗ್ಗೆ ಮಾಹಿತಿ ತಿಳಿಸಿಲ್ಲ. ಉಳಿದಂತೆ ವೈಫೈ, ಜಿಪಿಎಸ್‌, ಸೆನ್ಸಾರ್‌ನಂತಹ ಆಯ್ಕೆಗಳು ಇರಲಿವೆ.

Most Read Articles
Best Mobiles in India

English summary
Xiaomi Redmi 10X listing on the website of Tianyi Telecommunications in China.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X