Home
ಸುದ್ದಿಜಾಲ

6,999ರೂ.ಗೆ ಲಾಂಚ್ ಆಯ್ತು ಶಿಯೋಮಿಯ 'ರೆಡ್ಮಿ 8A ಡ್ಯುಯಲ್' ಫೋನ್!

ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನದೇ ಛಾಪು ಮೂಡಿಸಿರುವ ಶಿಯೋಮಿಯು ಇಂದು ಮತ್ತೆ ಹೊಸ ಸ್ಮಾರ್ಟ್‌ಫೋನ್‌ವೊಂದನ್ನು ಲಾಂಚ್ ಮಾಡಿದೆ. ನೂತನವಾಗಿ ಬಿಡುಗಡೆ ಆಗಿರುವ ರೆಡ್ಮಿ 8A ಡ್ಯುಯಲ್ ಸ್ಮಾರ್ಟ್‌ಫೋನ್‌ ನಿರೀಕ್ಷೆಯಂತೆ ಕಡಿಮೆ ಬೆಲೆಯ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಇದೊಂದು ಎಂಟ್ರಿ ಲೆವೆಲ್ ಕೇಟಗರಿಯಲ್ಲಿ ಗುರುತಿಸಿಕೊಂಡಿದೆ. ಆದ್ರೆ ಫೀಚರ್ಸ್‌ಗಳು ಆಕರ್ಷಕ ಅನಿಸುವಂತಿವೆ.

ಶಿಯೋಮಿ

ಹೌದು, ಶಿಯೋಮಿಯು ದೇಶಿಯ ಮಾರುಕಟ್ಟೆಯಲ್ಲಿ ಇಂದು (ಫೆ. 11) ರೆಡ್ಮಿ 8A ಡ್ಯುಯಲ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಹಿಂಬದಿಯಲ್ಲಿ 13ಎಂಪಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರೊಂದಿಗೆ 8ಎಂಪಿ ಸೆಲ್ಫಿ ಕ್ಯಾಮೆರಾ ಪಡೆದಿದೆ. ಹಾಗೆಯೇ ಇನ್ನೊಂದು ಮುಖ್ಯ ಹೈಲೈಟ್ಸ್‌ ಅಂದ್ರೆ, ಈ ಫೋನಿನ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ರೆಡ್ಮಿ 8A ಸ್ಮಾರ್ಟ್‌ಫೋನ್

ಇನ್ನು ರೆಡ್ಮಿ 8A ಸ್ಮಾರ್ಟ್‌ಫೋನ್ 2GB+32GB ಮತ್ತು 3GB+ 32GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಆರಂಭಿಕ ವೇರಿಯಂಟ್ ಬೆಲೆಯು 6,499 ರೂ. ಆಗಿದೆ. ಅಂದಹಾಗೆ ಇದೇ ಫೆಬ್ರುವರಿ 18 ರಂದು ಫ್ಲಿಪ್‌ಕಾರ್ಟ್‌, mi.com, ತಾಣಗಳಲ್ಲಿ ಈ ಸ್ಮಾರ್ಟ್‌ಫೋನ ಮೊದಲ ಸೇಲ್ ಆರಂಭವಾಗಲಿದೆ. ಸ್ಕೈ ವೈಟ್, ಸೀ ಬ್ಲೂ ಮತ್ತು ಮಿಡ್‌ನೈಟ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಉಳಿದಂತೆ ರೆಡ್ಮಿ 8A ಸ್ಮಾರ್ಟ್‌ಫೋನಿನ ಇತರೆ ಆಕರ್ಷಕ ಫೀಚರ್ಸ್‌ಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ರೆಡ್ಮಿ 8A ಸ್ಮಾರ್ಟ್‌ಫೋನ್ 720 x 1520 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.22 ಇಂಚಿನ ಡಾಟ್‌ ನಾಚ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19:9 ಆಗಿದ್ದು, ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 5 ಕವಚ ಪಡೆದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 270 ppi ಆಗಿದೆ.

ಪ್ರೊಸೆಸರ್ ಬಲವೇನು

ಪ್ರೊಸೆಸರ್ ಬಲವೇನು

ರೆಡ್ಮಿ 8A ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 439 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಆಂಡ್ರಾಯ್ಡ್ 9 ಪೈ ಓಎಸ್‌ನ ಬೆಂಬಲ ಸಹ ಇದೆ. ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಇದ್ದು, ಅವುಗಳು ಕ್ರಮವಾಗಿ 2GB+32GB ಮತ್ತು 3GB+ 32GB ಆಗಿವೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಅವಕಾಶ ಸಹ ಇದೆ.

ಕ್ಯಾಮೆರಾ ಹೇಗಿದೆ

ಕ್ಯಾಮೆರಾ ಹೇಗಿದೆ

ರೆಡ್ಮಿ 8A ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಹಿಂಬದಿಯ ರಿಯರ್ ಕ್ಯಾಮೆರಾವು ಸೋನಿಯ IMX363 ಸಾಮರ್ಥ್ಯದ 13ಎಂಪಿ ಸೆನ್ಸಾರ್ ಪಡೆದಿದೆ. ಮುಖ್ಯ ಕ್ಯಾಮೆರಾವು f/1.8 ಅಪರ್ಚರ್ ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿದೆ. ಕ್ಯಾಮೆರಾದಲ್ಲಿ ಆಟೋ ಫೋಕಸ್‌ ಸೇರಿದಂತೆ ಆಕರ್ಷಕ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರೆಡ್ಮಿ 8A ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್‌ ಆಗಿರುವುದು ಇದರ ಬ್ಯಾಟರಿಯೇ. ಈ ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದರೊಂದಿಗೆ 18W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಉಳಿದಂತೆ P2i ಕೋಟಿಂಗ್, ಎಫ್‌ಎಮ್ ರೇಡಿಯೊ, ಯುಎಸ್‌ಬಿ ಸಿ ಪೋರ್ಟ್, ವೈಫೈ, ಬ್ಲೂಟೂತ್ ಕನೆಕ್ಟಿವಿಟಿ ಸೌಲಭ್ಯಗಳು ಸಹ ಇವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ರೆಡ್ಮಿ 8A ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಬೇಸಿಕ್ ವೇರಿಯಂಟ್ 2GB RAM + 32GB ಬೆಲೆಯು 6,499ರೂ ಆಗಿದೆ. 3GB RAM + 32GB ಬೆಲೆಯು 6,999ರೂ ಆಗಿದೆ. ಇದೇ ಫೆಬ್ರುವರಿ 18 ರಂದು ಫ್ಲಿಪ್‌ಕಾರ್ಟ್‌, mi.com, ತಾಣಗಳಲ್ಲಿ ಈ ಸ್ಮಾರ್ಟ್‌ಫೋನ ಮೊದಲ ಸೇಲ್ ಆರಂಭವಾಗಲಿದೆ

Best Mobiles in India

English summary
Xiaomi has launched a new budget phone ‘Redmi 8A Dual’ in India. Check full specifications and features.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+