Home
ಸುದ್ದಿಜಾಲ

ಭಾರತದ ಮಾರುಕಟ್ಟೆಯಲ್ಲಿ ಶಿಯೋಮಿ ರೆಡ್‌ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಶಿಯೋಮಿ ಇದೀಗ ಶಿಯೋಮಿ ರೆಡ್‌ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಬಜೆಟ್ ಶ್ರೇಣಿಯ ಈ ಸ್ಮಾರ್ಟ್‌ಫೋನ್‌ ಬೆಲೆ 9,999 ರೂ ಆಗಿದೆ. ಅಲ್ಲದೆ ಇದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದ ರೆಡ್‌ಮಿ 9 ಸ್ಮಾರ್ಟ್‌ಫೋನ್‌ನ ಜಾಗತಿಕ ರೂಪಾಂತರದ ಮರುಬ್ರಾಂಡೆಡ್ ಆವೃತ್ತಿಯಾಗಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ತನ್ನ ರೆಡ್‌ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಪ್ರೈಮ್ ಟೈಮ್ ಆಲ್ರೌಂಡರ್ ಎಂಬ ಟ್ಯಾಗ್ ಸಾಲಿನೊಂದಿಗೆ ಬಿಡುಗಡೆ ಮಾಡುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ, ಮೀಡಿಯಾಟೆಕ್ ಹಿಲಿಯೊ G80 ಗೇಮಿಂಗ್ SoC ಪ್ರೊಸೆಸರ್‌, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಶಿಯೋಮಿ ರೆಡ್‌ಮಿ ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನು ಹೊಂದಿದ್ದು, 394 pp ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಜೊತೆಗೆ 400 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಜೊತೆಗೆ ಇದು flaunts an Aura 360 ವಿನ್ಯಾಸ, ಏರಿಳಿತದ ವಿನ್ಯಾಸವನ್ನು ಹೊಂದಿದೆ. 3D ಯುನಿಬಾಡಿ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದನ್ನು ಮಾಲಿ-ಜಿ 52 ಜಿಪಿಯು ಬೆಂಬಲಿಸುತ್ತದೆ. ಹಾಗೇಯೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಶಿಯೋಮಿ ರೆಡ್‌ಮಿ 9 ಪ್ರೈಮ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ f/ 2.2 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಆದರೆ ಸದ್ಯ ಇದು 10W ಚಾರ್ಜರ್‌ನೊಂದಿಗೆ ರವಾನಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi, ಬ್ಲೂಟೂತ್ 5.0, ವೈ-ಫೈ ಡೈರೆಕ್ಟ್, ಎಫ್‌ಎಂ ರೇಡಿಯೋ, NFC, GPS, AGPS, ಮತ್ತು ಅತಿಗೆಂಪು ಸೆನ್ಸಾರ್‌ ಅನ್ನು ಬೆಂಬಲಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ.

Best Mobiles in India

English summary
The newly launched Xiaomi Redmi 9 Prime price in India is set at Rs 9,999.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+