Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ 9 ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ 8,999ರೂ!

ಶಿಯೋಮಿ ಸಂಸ್ಥೆಯು ಹೊಸ ಬಜೆಟ್ ಸ್ಮಾರ್ಟ್‌ಫೋನ್ ರೆಡ್ಮಿ 9 ಇದೀಗ ಭಾರತದಲ್ಲಿ ಬಿಡುಗಡೆ ಆಗಿದೆ. ಕಳೆದ ವರ್ಷ ಬಿಡುಗಡೆ ಮಾಡಿದ್ದ ರೆಡ್ಮಿ 8 ಸ್ಮಾರ್ಟ್‌ಫೋನಿನ ಮುಂದುವರಿದ ಆವೃತ್ತಿಯಾಗಿದೆ. ರೆಡ್ಮಿ 9 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ 9 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಈ ಫೋನ್ 4GB RAM ಸಾಮರ್ಥ್ಯವನ್ನು ಪಡೆದಿದ್ದು, 64GB ಮತ್ತು 128GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ 9 ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ. ಈ ಫೋನ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ರೆಡ್ಮಿ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM ಸಾಮರ್ಥ್ಯವನ್ನು ಪಡೆದಿದ್ದು, 64GB ಮತ್ತು 128GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ರೆಡ್ಮಿ 9 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಇನ್ನು ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ರೆಡ್ಮಿ 9 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ 9 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 64GB ವೇರಿಯಂಟ್ ಬೆಲೆಯು 8,999ರೂ. ಆಗಿದೆ. ಹಾಗೆಯೇ 128GB ವೇರಿಯಂಟ್ ಬೆಲೆಯು 9,999ರೂ.

Best Mobiles in India

English summary
Xiaomi has launched the Redmi 9 in two variants- 4GB+64GB at Rs 8,999.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+