Home
ಸುದ್ದಿಜಾಲ

ರೆಡ್ಮಿ ನೋಟ್ 10 ಫೋನ್‌ ಖರೀದಿಸುವ ಗ್ರಾಹಕರಿಗೆ ಬಿಗ್ ಶಾಕ್!

ಸದ್ಯ ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ವಾತಾವರಣ ಇದ್ದು, ಜನಪ್ರಿಯ ಮೊಬೈಲ್ ಬ್ಯಾಂಡ್‌ಗಳು ಗ್ರಾಹಕರನ್ನು ಸೆಳೆಯಲು ವಿಶೇಷ ಕೊಡುಗೆಗಳನ್ನು ನೀಡುತ್ತ ಸಾಗಿವೆ. ಮುಖ್ಯವಾಗಿ ಕಂಪನಿಗಳು ಬಜೆಟ್‌ ಪ್ರೈಸ್‌ನಲ್ಲಿ ಆಕರ್ಷಕ ಫೀಚರ್ಸ್‌ಗಳಿರುವ ಫೋನ್‌ ಲಾಂಚ್ ಮಾಡುತ್ತಿವೆ. ಆದರೆ ಆ ಪೈಕಿ ಕೆಲವು ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಮಾತ್ರ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಆಕರ್ಷಿಸುತ್ತವೆ. ಹೀಗೆ ಇತ್ತೀಚಿಗೆ ಬಜೆಟ್‌ ಬೆಲೆಯಲ್ಲಿ ಗ್ರಾಹಕರನ್ನು ಆಕರ್ಷಿಸಿರುವ ಶಿಯೋಮಿ ಕಂಪನಿಯ ರೆಡ್ಮಿ ನೋಟ್ 10 ಫೋನ್‌ ಈಗ ಗ್ರಾಹಕರಿಗೆ ಶಾಕ್ ನೀಡಿದೆ.

ಇತ್ತೀಚಿಗಷ್ಟೆ

ಹೌದು, ಶಿಯೋಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಮತ್ತೆ 500ರೂ.ಗಳ ಏರಿಕೆ ಆಗಿದೆ. ಈಗಾಗಲೇ ಎರಡು ಬಾರಿ ಏರಿಕೆ ಕಂಡಿರುವ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಈಗ ಮೂರನೇ ಬಾರಿ ಹೆಚ್ಚಳ ಆಗಿದೆ. ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್‌ನ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಎರಡು ವೇರಿಯಂಟ್‌ ಆಯ್ಕೆಗಳ ದರದಲ್ಲಿಯೂ ಈಗ ಏರಿಕೆ ಆಗಿದೆ. 4GB + 64GB ವೇರಿಯಂಟ್ ಬೆಲೆಯು ಈಗ 13,499ರೂ. ಆಗಿದೆ. ಅದೇ ರೀತಿ 6GB + 128GB ವೇರಿಯಂಟ್ ಬೆಲೆಯು ಈಗ 16,449ರೂ. ಆಗಿದೆ. ಇನ್ನು ರೆಡ್ಮಿ ನೋಟ್ 10 ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 13,499 ರೂ. ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 16,449 ರೂ.ಬೆಲೆಯನ್ನು ಹೊಂದಿದ್ದು, ಫೋನ್ ಆಕ್ವಾ ಗ್ರೀನ್, ಫ್ರಾಸ್ಟ್ ವೈಟ್ ಮತ್ತು ಶ್ಯಾಡೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Xiaomi Redmi Note 10 Gets Third Price Hike in India, Now Starts at Rs. 13499.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+