ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಶಿಯೋಮಿ ರೆಡ್ಮಿ ನೋಟ್‌ 12 ಸರಣಿ!

|

ಶಿಯೋಮಿ ಕಂಪೆನಿ ರೆಡ್ಮಿ ಬ್ರ್ಯಾಂಡ್‌ ಅಡಿಯಲ್ಲಿ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಹೊಸ ರೆಡ್ಮಿ ನೋಟ್‌ 12 ಸರಣಿಯನ್ನು ಪರಿಚಯಿಸಲು ಮುಂದಾಗಿದೆ. ಈ ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಮಾರುಕಟ್ಟೆಗೆ ಪರಿಚಯಿಸುವುದಾಗಿ ದೃಡಪಡಿಸಿದೆ. ಇನ್ನು ಈ ಸರಣಿಯಲ್ಲಿ ರೆಡ್ಮಿ ನೋಟ್‌ 12, ರೆಡ್ಮಿ ನೋಟ್‌ 12 ಪ್ರೊ ಮತ್ತು ರೆಡ್ಮಿ ನೋಟ್‌ 12 ಪ್ರೊ+ ಸ್ಮಾರ್ಟ್‌ಫೋನ್‌ಗಳು ಬರಲಿವೆ ಎನ್ನಲಾಗಿದೆ.

ಶಿಯೋಮಿ

ಹೌದು, ಶಿಯೋಮಿ ರೆಡ್ಮಿ ಕಂಪೆನಿ ಶೀಘ್ರದಲ್ಲೇ ರೆಡ್ಮಿ ನೋಟ್‌ 12 ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಹೇಳಿದೆ. ಈ ಪ್ರೊಸೆಸರ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಸುಧಾರಿತ ಬ್ಯಾಟರಿ ಬಾಳಿಕೆ ಮತ್ತು ಕಾರ್ಯಕ್ಷಮತೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಹೊಸ ರೆಡ್ಮಿ ನೋಟ್‌ 12 ಸರಣಿ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ನೋಟ್‌ 12

ರೆಡ್ಮಿ ನೋಟ್‌ 12

ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥವನ್ನು ಪಡೆದುಕೊಂಡಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಜೊತೆಗೆ 5100mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿರಲಿದೆ.

ರೆಡ್ಮಿ ನೋಟ್‌ 12ಪ್ರೊ

ರೆಡ್ಮಿ ನೋಟ್‌ 12ಪ್ರೊ

ರೆಡ್ಮಿ ನೋಟ್‌ 12ಪ್ರೊ ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಡಿಸ್‌ಪ್ಲೇ ರಚನೆಯ ಅನುಪಾತ 20.1:9 ಇರಲಿದೆ ಎನ್ನಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,980mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ.

ರೆಡ್ಮಿ ನೋಟ್‌ 12 ಪ್ರೊ+

ರೆಡ್ಮಿ ನೋಟ್‌ 12 ಪ್ರೊ+

ರೆಡ್ಮಿ ನೋಟ್‌ 12 ಪ್ರೊ+ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 24 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ ಎಂದು ಹೇಳಲಾಗಿದೆ. ಜೊತೆಗೆ 5100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

Best Mobiles in India

English summary
Xiaomi Redmi Note 12 Series With MediaTek Dimensity 1080 SoC to Launch Soon

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X