ರೆಡ್ಮಿ ನೋಟ್ 9 ಮತ್ತು ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

|

ಶಿಯೋಮಿ ಕಂಪನಿಯ ಜನಪ್ರಿಯ ರೆಡ್ಮಿ ನೋಟ್ 9 ಮತ್ತು ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಈಗಾಗಲೇ ಅಬ್ಬರಿಸಿ ಗ್ರಾಹಕರನ್ನು ಸೆಳೆದಿವೆ. ಇದೀಗ ಈ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡು ಬಂದಿದ್ದು, ಗ್ರಾಹಕರು ಮತ್ತೆ ತಿರುಗಿ ನೋಡುವಂತೆ ಮಾಡಿದೆ. ಕ್ವಾಡ್‌ ಕ್ಯಾಮೆರಾ ಫೀಚರ್ಸ್‌, ವೇಗದ ಪ್ರೊಸೆಸರ್‌ ಹಾಗೂ ಬಿಗ್ ಬ್ಯಾಟರಿ ಆಯ್ಕೆ ಈ ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ರೆಡ್ಮಿ ನೋಟ್ 9 ಮತ್ತು ನೋಟ್ 9 ಪ್ರೊ ಮ್ಯಾಕ್ಸ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಹೌದು, ಶಿಯೋಮಿ ಸಂಸ್ಥೆಯು ತನ್ನ ರೆಡ್ಮಿ ನೋಟ್ 9 ಮತ್ತು ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್‌ ಸೇರಿದಂತೆ ಇತರೆ ಕೆಲವು ಆಯ್ದ ಮಾಡೆಲ್‌ಗಳಿಗೆ 200ರೂ.ಯಿಂದ 2000ರೂ.ಗಳ ವರೆಗೂ ರಿಯಾಯಿತಿ ಘೋಷಿಸಿದೆ. ಇದೊಂದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಇದೇ ಮಾರ್ಚ್ 31ರ ವರೆಗೂ ರಿಯಾಯಿತಿ ಲಭ್ಯ ಇರಲಿದೆ. ಗ್ರಾಹಕರು ಅಧಿಕೃತ ಮಿ.ಕಾಮ್ ತಾಣದಲ್ಲಿ ಹಾಗೂ ಅಮೆಜಾನ್ ವೆಬ್‌ಸೈಟ್‌ ಮೂಲಕ ಖರೀದಿಸಬಹುದಾಗಿದೆ. ಹಾಗಾದರೇ ಈ ಎರಡು ಫೋನ್‌ಗಳ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 9- ಡಿಸ್‌ಪ್ಲೇ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ. ಈ ಫೋನ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ.

ರೆಡ್ಮಿ ನೋಟ್ 9- ಪ್ರೊಸೆಸರ್
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 ಆಕ್ಟಾ ಕೋರ್ ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB, 4GB + 128GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ 512GB ವರೆಗೂ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ರೆಡ್ಮಿ ನೋಟ್ 9 ಮತ್ತು ನೋಟ್ 9 ಪ್ರೊ ಮ್ಯಾಕ್ಸ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ರೆಡ್ಮಿ ನೋಟ್ 9- ಕ್ಯಾಮೆರಾ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ ಎರಡು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 13ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ರೆಡ್ಮಿ ನೋಟ್ 9- ಬ್ಯಾಟರಿ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 22.5W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ರೆಡ್ಮಿ ನೋಟ್ 9 ಮತ್ತು ನೋಟ್ 9 ಪ್ರೊ ಮ್ಯಾಕ್ಸ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌- ಡಿಸ್‌ಪ್ಲೇ
ಶಿಯೋಮಿ ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 385 PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿರುವ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌ 5 ಅನ್ನು ಫ್ರಂಟ್‌ ಹಾಗೂ ರಿಯರ್‌ ಸೆಟ್‌ಅಪ್‌ನಲ್ಲೂ ಸಹ ನೀಡಲಾಗಿದೆ.

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌- ಪ್ರೊಸೆಸರ್‌
ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 720G ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10ಒಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB, 6GB RAM ಮತ್ತು 128GB, ಹಾಗೂ 8GB RAM ಮತ್ತು 128GB ಆಂತರಿಕ ಸಂಗ್ರಹಣ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ.

ರೆಡ್ಮಿ ನೋಟ್ 9 ಮತ್ತು ನೋಟ್ 9 ಪ್ರೊ ಮ್ಯಾಕ್ಸ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌- ಕ್ಯಾಮೆರಾ
ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೆ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ 120 ಡಿಗ್ರಿ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌- ಬ್ಯಾಟರಿ
ಶಿಯೋಮಿ ರೆಡ್ಮಿ ನೋಟ್‌ 9 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ನ್ಯಾವಿಕ್‌ ಜಿಪಿಎಸ್‌ ಟೆಕ್ನಾಲಜಿ ಹಾಗೂ 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Several Xiaomi devices in India are up for sale at a discounted price, with the discount ranging from Rs 200 to all the way up to Rs 2000.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X