ರೆಡ್ಮಿಯ ಈ 5G ಫೋನಿಗೆ ಭರ್ಜರಿ ಡಿಸ್ಕೌಂಟ್; ಗ್ರಾಹಕರಿಗೆ ಉಳಿತಾಯ ಖಚಿತ!
ಆನ್‌ಲೈನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳು ಸೇಲ್ ಮೇಳಗಳನ್ನು ಆಯೋಜಿಸುವ ಮೂಲಕ ಮೊಬೈಲ್ ಡಿವೈಸ್‌ಗಳಿಗೆ ಭರ್ಜರಿ ಡಿಸ್ಕೌಂಟ್ ನೀಡಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತವೆ. ಅದೇ ಹಾದಿಯಲ್ಲಿ ಮೊಬೈಲ್ ಬ್ರ್ಯಾಂಡ್‌ಗಳು ಕೂಡಾ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ವಿಶೇಷ ಸೇಲ್ ಆಯೋಜಿಸುವ ಮೂಲಕ ತಮ್ಮ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿವೆ. ಸದ್ಯ ಶಿಯೋಮಿ ಸಂಸ್ಥೆಯು ಸೂಪರ್ ಸೇವರ್ ಸೇಲ್ ಮಾರಾಟ ಮೇಳವನ್ನು ಆಯೋಜಿಸಿದ್ದು, ಆಯ್ದ ಕೆಲವು ಉತ್ಪನ್ನಗಳಿಗೆ ಸಖತ್ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ.
ಹೌದು, ಶಿಯೋಮಿ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಶಿಯೋಮಿ ಸೂಪರ್ ಸೇವರ್ ಸೇಲ್ ( Xiaomi Super Saver Sale ) ಮೇಳವನ್ನು ಆಯೋಜಿಸಿದ್ದು, ಈ ಮಾರಾಟದಲ್ಲಿ ಆಯ್ದ ಉತ್ಪನ್ನಗಳು ಬಿಗ್ ಡಿಸ್ಕೌಂಟ್ ಪಡೆದುಕೊಂಡಿವೆ. ಅವುಗಳ ಪೈಕಿ ಶಿಯೋಮಿಯ ರೆಡ್ಮಿ 12 5G ಫೋನ್ ಆಕರ್ಷಕ ರಿಯಾಯಿತಿ ಪಡೆದಿದೆ. 17999ರೂ. ಬೆಲೆಯಲ್ಲಿ ಇರುವ ಈ ಫೋನ್ ಅನ್ನು ಈಗ 9999ರೂ. ಗಳ ಆಫರ್ ದರದಲ್ಲಿ ಖರೀದಿ ಮಾಡಬಹುದಾಗಿದೆ.

ಅಂದಹಾಗೆ ರೆಡ್ಮಿ (Redmi) ಈ ಮೊಬೈಲ್ 4GB + 128GB, 6GB + 128GB ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಹೊಂದಿದ್ದು, 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಒಳಗೊಂಡಿದೆ. ಇನ್ನುಳಿದಂತೆ ರೆಡ್ಮಿ 12 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 12 5G - ಫೀಚರ್ಸ್
ರೆಡ್ಮಿ 12 5G ಫೋನ್ 6.79 ಇಂಚಿನ FHD ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಇದರೊಂದಿಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್ ಹಾಗೂ 240Hz ಟಚ್ ಮಾದರಿ ರೇಟ್ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.
ರೆಡ್ಮಿ 12 5G ಫೋನ್ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ ಮೂರು ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಅವು ಕ್ರಮವಾಗಿ 4GB + 128GB, 6GB + 128GB ಹಾಗೂ 8GB + 256GB ಆಗಿವೆ. ಅಲ್ಲದೇ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ.
ರೆಡ್ಮಿ 12 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ರೆಡ್ಮಿ 12 5G ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದಿದೆ. ಇದರ ಜೊತೆಗೆ ಈ ಫೋನ್ ಆಂಡ್ರಾಯ್ಡ್ 13 ಅನ್ನು ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, IP53 ರೇಟಿಂಗ್ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ. ಇನ್ನು ಖರೀದಿದಾರರು ಈ ಮೊಬೈಲ್ ಅನ್ನು ಸಿಲ್ವರ್, ಬ್ಲ್ಯಾಕ್ ಹಾಗೂ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








