Home
ಸುದ್ದಿಜಾಲ

ಶಿಯೋಮಿ ದಿಢೀರ್ ಇಂತಾ ಸುದ್ದಿ ಕೊಡುತ್ತೆ ಅಂತಾ ಯಾರೂ ಊಹಿಸಿರಲಿಲ್ಲ!

ಜನಪ್ರಿಯ ಮೊಬೈಲ್ ತಯಾರಿಕಾ ಕಂಪನಿ ಶಿಯೋಮಿ ಈಗಾಗಲೇ ಹಲವು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಮಾಡಿದ ಮಿ 11 ಸ್ಮಾರ್ಟ್‌ಫೋನ್‌ ಸರಣಿಯು ಹೈ ಎಂಡ್‌ ಫೀಚರ್ಸ್‌ಗಳಿಂದ ಸದ್ದು ಮಾಡಿತ್ತು. ಇನ್ನು ಈ ಸರಣಿಯು ಮಿ 11 ಅಲ್ಟ್ರಾ, ಮಿ 11 ಪ್ರೊ ಹಾಗೂ ಮಿ 11 ಲೈಟ್‌ 5G ಫೋನ್ ಮಾಡೆಲ್‌ಗಳನ್ನು ಒಳಗೊಂಡಿದೆ. ಆದರೆ ಶಿಯೋಮಿ ಕಂಪನಿಯು ದಿಡೀರ್‌ ಇಂತಾ ಶಾಕಿಂಗ್ ಸಮಾಚಾರ್‌ ನೀಡಿದೆ.

ಅಲ್ಟ್ರಾ

ಹೌದು, ಶಿಯೋಮಿ ಸಂಸ್ಥೆಯು ತನ್ನ ಜನಪ್ರಿಯ 'ಮಿ 11 ಅಲ್ಟ್ರಾ' (Mi 11 Ultra) ಫೋನ್‌ ಮಾರಾಟವನ್ನು ಭಾರತದಲ್ಲಿ ನಿಲ್ಲಿಸಲಿದೆ. ಶಿಯೋಮಿ ತನ್ನ ಅಧಿಕೃತ ವೆಬ್‌ಸೈಟ್‌ನಿಂದ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್ ಅನ್ನು ಲಿಸ್ಟ್‌ನಿಂದ ಸಹ ತೆಗೆದುಹಾಕಲಾಗಿದೆ. ಹೀಗಾಗಿ ಈ ಸ್ಮಾರ್ಟ್‌ಫೋನ್ ದೇಶದಲ್ಲಿ ಮತ್ತೆ ಮಾರಾಟವಾಗುವುದಿಲ್ಲ ಎಂದು ಇಂಡಿಯಾ ಟುಡೇ ವರದಿಯಿಂದ ತಿಳಿದು ಬಂದಿದೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಹಾಗೂ 50 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗಾದರೇ ಮಿ 11 ಅಲ್ಟ್ರಾ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮಿ 11 ಅಲ್ಟ್ರಾ- ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ಮಿ 11 ಅಲ್ಟ್ರಾ- ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ಮಿ 11 ಅಲ್ಟ್ರಾ ಫೋನ್ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.81 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದ್ದು, 120Hz ರೀಫ್ರೇಶ್‌ ರೇಟ್‌ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, 8GB RAM + 256GB, 12GB RAM + 256GB ಆಯ್ಕೆಗಳನ್ನು ಒಳಗೊಂಡಿದೆ.

ಮಿ 11 ಅಲ್ಟ್ರಾ- ಕ್ಯಾಮೆರಾ ಹಾಗೂ ಬ್ಯಾಟರಿ

ಮಿ 11 ಅಲ್ಟ್ರಾ- ಕ್ಯಾಮೆರಾ ಹಾಗೂ ಬ್ಯಾಟರಿ

ಮಿ 11 ಅಲ್ಟ್ರಾ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು ಅತ್ಯುತ್ತಮ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಮಿ 11 ಅಲ್ಟ್ರಾ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಮಿ 11 ಪ್ರೊ- ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ಮಿ 11 ಪ್ರೊ- ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ಮಿ 11 ಪ್ರೊ ಫೋನ್ ಸಹ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.81 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದ್ದು, 120Hz ರೀಫ್ರೇಶ್‌ ರೇಟ್‌ ಪಡೆದಿದೆ. ಹಾಗೆಯೇ HDR10+ ಹಾಗೂ ಡಾಲ್ಬಿ ವಿಷನ್ ಸಪೋರ್ಟ್‌ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, 8GB RAM + 128GB, 8GB RAM + 256GB ಆಯ್ಕೆಗಳನ್ನು ಒಳಗೊಂಡಿದೆ.

ಮಿ 11 ಪ್ರೊ- ಕ್ಯಾಮೆರಾ ಹಾಗೂ ಬ್ಯಾಟರಿ

ಮಿ 11 ಪ್ರೊ- ಕ್ಯಾಮೆರಾ ಹಾಗೂ ಬ್ಯಾಟರಿ

ಮಿ 11 ಪ್ರೊ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು 8 ಎಂಪಿ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಮಿ 11 ಪ್ರೊ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಮಿ 11 ಲೈಟ್‌- ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ಮಿ 11 ಲೈಟ್‌- ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ಮಿ 11 ಲೈಟ್‌ ಫೋನ್ ಸಹ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಗೊರಿಲ್ಲಾ ಗ್ಲಾಸ್ 6 ರಕ್ಷಣೆ ಇದ್ದು, 90Hz ರೀಫ್ರೇಶ್‌ ರೇಟ್‌ ಪಡೆದಿದೆ. ಹಾಗೆಯೇ HDR10+ ಹಾಗೂ ಡಾಲ್ಬಿ ವಿಷನ್ ಸಪೋರ್ಟ್‌ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, 8GB RAM + 128GB, 8GB RAM + 256GB ಆಯ್ಕೆಗಳನ್ನು ಒಳಗೊಂಡಿದೆ.

ಮಿ 11 ಲೈಟ್‌- ಕ್ಯಾಮೆರಾ ಹಾಗೂ ಬ್ಯಾಟರಿ

ಮಿ 11 ಲೈಟ್‌- ಕ್ಯಾಮೆರಾ ಹಾಗೂ ಬ್ಯಾಟರಿ

ಮಿ 11 ಲೈಟ್‌ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಎಂಪಿ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು 5 ಎಂಪಿ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಮಿ 11 ಲೈಟ್‌ ಫೋನ್ 4,250mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

Best Mobiles in India

English summary
Xiaomi will not bring more Mi 11 Ultra units to India and this is officially the end of this smartphone.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+