Home
ಸುದ್ದಿಜಾಲ

ನೀವು ಈ ಮೊಬೈಲ್‌ ಅನ್ನು ತುಂಬಾ ಕಡಿಮೆ ಬೆಲೆಗೆ ಖರೀದಿಸಬಹುದು!

ಸ್ವದೇಶಿ ಮೊಬೈಲ್‌ ಬ್ರ್ಯಾಂಡ್‌ ಲಾವಾ ಕಂಪನಿಯು ಹಲವು ಅಗ್ಗದ ಬೆಲೆಯ ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸಂಸ್ಥೆಯ ಫೋನ್‌ಗಳ ಪೈಕಿ ಲಾವಾ ಬ್ಲೇಜ್‌ 2 ಸ್ಮಾರ್ಟ್‌ಫೋನ್‌ ಈ ಫೋನ್‌ ಡಿಸೈನ್‌ ಹಾಗೂ ಬೆಲೆಯಿಂದ ಈಗಾಗಲೇ ಟ್ರೆಂಡಿ ಎನಿಸಿದ್ದು, ಇದೀಗ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್‌ ನಲ್ಲಿ ಲಾವಾ ಬ್ಲೇಜ್‌ 2 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಶೇ. 18% ರಷ್ಟು ರಿಯಾಯಿತಿ ಕಾಣಿಸಿಕೊಂಡಿದೆ. ಈ ಫೋನ್ ಗ್ಲಾಸ್ ಬ್ಲ್ಯಾಕ್, ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಆರೆಂಜ್‌ ಕಲರ್‌ ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯ ಇದೆ. ಹಾಗಾದರೆ ಲಾವಾ ಬ್ಲೇಜ್‌ 2 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ನೀವು ಈ ಮೊಬೈಲ್‌ ಅನ್ನು ತುಂಬಾ ಕಡಿಮೆ ಬೆಲೆಗೆ ಖರೀದಿಸಬಹುದು!

ಲಾವಾ ಬ್ಲೇಜ್‌ 2 ಡಿಸ್‌ಪ್ಲೇ ವಿನ್ಯಾಸ ಹೀಗಿದೆ
ಲಾವಾ ಬ್ಲೇಜ್‌ 2 ಮೊಬೈಲ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್‌ ರೇಟ್‌ ಅನ್ನು ಸಪೋರ್ಟ್‌ ಕೂಡಾ ಮಾಡುತ್ತದೆ. ಇನ್ನು ಡಿಸ್‌ಪ್ಲೇ ಪಂಚ್‌ ಹೋಲ್‌ ವಿನ್ಯಾಸವನ್ನು ಹೊಂದಿದ್ದು, ಇದರ ಜೊತೆಗೆ 2.5D ಕರ್ವ್ಡ್ ಸ್ಕ್ರೀನ್ ಅನ್ನು ಸಪೋರ್ಟ್‌ ಮಾಡುತ್ತದೆ.

ಲಾವಾ ಬ್ಲೇಜ್‌ 2 ಪ್ರೊಸೆಸರ್‌ ಪವರ್ ಎಷ್ಟಿದೆ
ಲಾವಾ ಬ್ಲೇಜ್‌ 2 ಮೊಬೈಲ್‌ ಯುನಿಸೋಕ್‌ T616 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು ಆಂಡ್ರಾಯ್ಡ್‌ ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 6 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದ್ದು, ಇದು 5GB ವರೆಗೆ ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶ ಒದಗಿಸಿದೆ.

ಲಾವಾ ಬ್ಲೇಜ್‌ 2 ಕ್ಯಾಮೆರಾ ರಚನೆ ಹೇಗಿದೆ
ಲಾವಾ ಬ್ಲೇಜ್‌ 2 ಮೊಬೈಲ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿದೆ. ಕ್ಯಾಮೆರಾ ಫೀಚರ್ಸ್‌ ಗಳಲ್ಲಿ ಪೋರ್ಟ್ರೇಟ್, ನೈಟ್, AI, ಪ್ರೊ, ಬ್ಯೂಟಿ, ಸ್ಲೋ ಮೋಷನ್, ಆಡಿಯೋ ನೋಟ್, ಟೈಮ್‌ಲ್ಯಾಪ್ಸ್, ಫಿಲ್ಟರ್‌ಗಳು, HDR ಮತ್ತು ಪನೋರಮಾದಂತಹ ಸೌಲಭ್ಯಗಳು ಲಭ್ಯ.

ಲಾವಾ ಬ್ಲೇಜ್‌ 2 ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ
ಲಾವಾ ಬ್ಲೇಜ್‌ 2 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ 18W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಕೂಡಾ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಪೋರ್ಟ್‌, ಬ್ಲೂಟೂತ್‌, ವೈಫೈ ಹಾಗೂ 3.5mm ಆಡಿಯೋ ಜ್ಯಾಕ್ ಸೇರಿದಂತೆ ಇತರೆ ಕೆಲವು ಉಪಯುಕ್ತ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.

ಲಾವಾ ಬ್ಲೇಜ್‌ 2 ಕಲರ್‌ ಮತ್ತು ಮೆಮೊರಿ ಸೌಲಭ್ಯ ಹೀಗಿದೆ
ಭಾತದಲ್ಲಿ ಲಾವಾ ಬ್ಲೇಜ್‌ 2 ಸ್ಮಾರ್ಟ್‌ಫೋನ್‌ 6 GB RAM ಮತ್ತು 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಒಳಗೊಂಡಿದೆ. ಇನ್ನು ಲಾವಾ ಬ್ಲೇಜ್ 2 ಸ್ಮಾರ್ಟ್‌ಫೋನ್‌ ಗ್ಲಾಸ್ ಬ್ಲ್ಯಾಕ್, ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಆರೆಂಜ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Lava Blaze 2 price cut on amazon. check offer price, camera and all specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+