ಡಿಸ್ಕೌಂಟ್‌ನಲ್ಲಿ ರಿಯಲ್‌ಮಿ ಫೋನ್ ಖರೀದಿಗೆ ಇದಕ್ಕಿಂತ ಬೆಸ್ಟ್ ಟೈಮ್ ಬೇಕಾ?
ರಿಯಲ್‌ಮಿ ಮೊಬೈಲ್ ಕಂಪನಿಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ನಾರ್ಜೋ ಸರಣಿಯಲ್ಲಿ ಇತ್ತೀಚಿಗೆ ಪರಿಚಯಿಸಿರುವ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳಿಂದ ಫೋನ್ ಪ್ರಿಯರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡು ಗ್ರಾಹಕರನ್ನು ಆಕರ್ಷಿಸಿದೆ.
ಹೌದು, ರಿಯಲ್‌ಮಿ ಕಂಪನಿಯ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಮಾರುಕಟ್ಟೆಯಲ್ಲಿ ಈಗ 15% ನಷ್ಟು ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 64 GB ಸ್ಟೋರೇಜ್‌ನ ವೇರಿಯಂಟ್ 12,999 ರೂ. ಗಳ ಪ್ರೈಸ್ ಟ್ಯಾಗ್ ಹೊಂದಿದ್ದು, 10,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಲೈಮ್, ಗ್ರ್ಯಾಫೈಟ್ ಮತ್ತು ವೈಲೆಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ರಿಯಲ್‌ಮಿ ನಾರ್ಜೊ N55 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ N55 ಡಿಸ್‌ಪ್ಲೇ ವಿನ್ಯಾಸ : ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ 6.72 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಮಿನಿ ಕ್ಯಾಪ್ಸುಲ್ ಫೀಚರ್ಸ್ ಅನ್ನು ಹೊಂದಿದ್ದು, "ಡಿಸ್ಪ್ಲೇಯನ್ನು ಮನಬಂದಂತೆ ಸೆಟ್ ಮಾಡಲು ಅವಕಾಶ ನೀಡಲಿದೆ. ಜೊತೆಗೆ ಕ್ಯಾಮರಾ ಪಂಚ್-ಹೋಲ್ ಕಟೌಟ್ ಸುತ್ತಲೂ ಸುತ್ತುತ್ತದೆ. ಆದರೆ ಚಾರ್ಜಿಂಗ್, ಡೇಟಾ ಬಳಕೆ ಮತ್ತು ಸ್ಟೆಪ್ಸ್ ಕೌಂಟ್‌ಗೆ ನೋಟಿಫೀಕೇಶನ್‌ಗಳನ್ನು ನೀಡಲಿದೆ.
ರಿಯಲ್‌ಮಿ ನಾರ್ಜೊ N55 ಪ್ರೊಸೆಸರ್ : ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ Realme UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್ ಆಗಲಿದೆ. ಹಾಗೆಯೇ 4GB + 64GB ಮತ್ತು 6GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ.
ರಿಯಲ್‌ಮಿ ನಾರ್ಜೊ N55 ಕ್ಯಾಮೆರಾ ರಚನೆ : ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ N55 ಬ್ಯಾಟರಿ : ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಕೇವಲ 29 ನಿಮಿಷಗಳಲ್ಲಿ 0 ದಿಂದ 50%ವರೆಗೆ ಚಾರ್ಜ್ ಮಾಡಬಹುದು.
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಈ ಫೋನ್ 4GB + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








