Home
ಸುದ್ದಿಜಾಲ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಫೋನ್‌ 1,500ರೂ. ಡಿಸ್ಕೌಂಟ್‌ನಲ್ಲಿ ಲಭ್ಯ!

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶಿಯೋಮಿ ಈಗಾಗಲೇ ನೋಟ್ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಹಲವು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಈ ಫೋನ್‌ ಇದೀಗ 1,500ರೂ. ಡಿಸ್ಕೌಂಟ್‌ನಲ್ಲಿ ಲಭ್ಯವಿದ್ದು, ಮತ್ತಷ್ಟು ಗ್ರಾಹಕರು ತಿರುಗಿ ನೋಡುವಂತೆ ಮಾಡಿದೆ.

ಮ್ಯಾಕ್ಸ್‌

ಹೌದು, ಶಿಯೋಮಿಯ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಫೋನ್‌ ಈಗ ಕೊಡಗೆಯಲ್ಲಿ ಲಭ್ಯ. ಗ್ರಾಹಕರು 1,500ರೂ. ಡಿಸ್ಕೌಂಟ್‌ ಪಡೆಯಲು HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬೇಕಾಗುತ್ತದೆ. ಈ ಕೊಡುಗೆಯೊಂದಿಗೆ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ 19,999ರೂ.ಗಳಿಗೆ ಬದಲಾಗಿ 18,499ರೂ. ಸಿಗಲಿದೆ. ಗ್ರಾಹಕರು mi.com ನಿಂದ ಸ್ಮಾರ್ಟ್ ಫೋನ್ ಖರೀದಿಸಬೇಕು. ಇನ್ನು ಈ ಫೋನ್ ಡಾರ್ಕ್ ನೈಟ್, ಗ್ಲೇಶಿಯಲ್ ಬ್ಲೂ ಮತ್ತು ವಿಂಟೇಜ್ ಬ್ರಾಂಜ್‌ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಎಸ್ಟ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ.

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಕ್ವಾಡ್‌ ಕ್ಯಾಮೆರಾ ವಿಶೇಷತೆ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.

Best Mobiles in India

English summary
You Can Purchase Redmi Note 10 Pro Max Phone With Rs 1,500 Discount.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+