ವಿ ಟೆಲಿಕಾಂನ ಪ್ರಿಪೇಯ್ಡ್‌ ಪ್ಲಾನ್‌ಗಳ ಹೊಸ ಬೆಲೆ ಇಂದಿನಿಂದ ಅನ್ವಯ!

|

ದೇಶದ ಟೆಲಿಕಾಂ ವಲಯದಲ್ಲಿ ಇದೀಗ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಟೆಲಿಕಾಂ ಕಂಪೆನಿಗಳು ತಮ್ಮ ಟಾರಿಫ್‌ ಅನ್ನು ಹೆಚ್ಚಳ ಮಾಡುತ್ತಿವೆ. ಸದ್ಯ ಇಂದಿನಿಂದ ವಿ ಟೆಲಿಕಾಂನ ಹೊಸ ಬೆಲೆಗಳು ಅನ್ವಯವಾಗಲಿವೆ. ಏರ್‌ಟೆಲ್‌ ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ ಬೆಲೆ ಹೆಚ್ಚಳ ಮಾಡಿದ ನಂತರ ವಿ ಟೆಲಿಕಾಂ ಕೂಡ ಬೆಲೆ ಹೆಚ್ಚಳ ಮಾಡಿದೆ. ಆದರೆ ಏರ್‌ಟೆಲ್‌ಗೂ ಒಂದು ದಿನ ಮುಂಚಿತವಾಗಿಯೇ ವಿ ಟೆಲಿಕಾಂ ತನ್ನ ಹೊಸ ದರವನ್ನು ಜಾರಿಗೊಳಿಸಿದೆ.

ವಿ ಟೆಲಿಕಾಂ

ಹೌದು, ವಿ ಟೆಲಿಕಾಂ ಪ್ರಿಪೇಯ್ಡ್‌ ಪ್ಲಾನ್‌ಗಳ ಹೊಸ ಬೆಲೆ ಇಂದಿನಿಂದಲೇ ಅನ್ವಯವಾಗಲಿದೆ. ವಿ ಟೆಲಿಕಾಂ ತನ್ನ ಬೆಲೆ ಏರಿಕೆಯು ಬಳಕೆದಾರರಿಗೆ ಸರಾಸರಿ ಆದಾಯವನ್ನು (ARPU) ಸುಧಾರಿಸಲು ಸಹಾಯ ಮಾಡಲಿದೆ ಎಂದು ಹೇಳಿದೆ. ಅಲ್ಲದೆ ಉದ್ಯಮವು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಹೇಳಿಕೊಂಡಿದೆ. ಇನ್ನು ವಿ ಟೆಲಿಕಾಂ ತನ್ನ ವಾರ್ಷಿಕ ಪ್ಲಾನ್‌ನಲ್ಲಿ 500ರೂ.ವರೆಗೆ ಬೆಲೆಯನ್ನು ಹೆಚ್ಚಳ ಮಾಡಿದೆ. ಹಾಗಾದ್ರೆ ವಿ ಟೆಲಿಕಾಂನ ಹೊಸ ಬೆಲೆ ಜಾರಿ ನಂತರ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿ ಟೆಲಿಕಾಂ

ವಿ ಟೆಲಿಕಾಂ ತನ್ನ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳದ ನಂತರ 79ರೂ.ಗಳ ಬೇಸಿಕ್‌ ಪ್ಲಾನ್‌ ಇದೀಗ 99ರೂ ಬೆಲೆಯನ್ನು ಪಡೆದಿದೆ. ಇದು 99ರೂ. ಟಾಕ್‌ಟೈಮ್‌ ಹಾಗೂ 200 MB + 1p/sec ವಾಯ್ಸ್‌ ಟಾರಿಫ್‌ ಪ್ರಯೋಜನವನ್ನು ನೀಡಲಿದೆ. ಇದರೊಂದಿಗೆ ವಿ ಟೆಲಿಕಾಂನ 149ರೂ.ಗಳ ಪ್ಲಾನ್‌ ಬೆಲೆ ಇದೀಗ 179ರೂ.ಗಳಿಗೆ ಏರಿಕೆಯಾಗಿದೆ. ಇದರಲ್ಲಿ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌, 300 SMS ಹಾಗೂ 2GB Data ಪ್ರಯೋಜನ ದೊರೆಯಲಿದೆ.

ಬೆಲೆ ಏರಿಕೆಯ ನಂತರ ವಿ ಟೆಲಿಕಾಂ ಪ್ರಿಪೇಯ್ಡ್‌ ಪ್ಲಾನ್‌

ಬೆಲೆ ಏರಿಕೆಯ ನಂತರ ವಿ ಟೆಲಿಕಾಂ ಪ್ರಿಪೇಯ್ಡ್‌ ಪ್ಲಾನ್‌

ಇನ್ನು ವಿ ಟೆಲಿಕಾಂನ 149ರೂ.ಗಳ ಪ್ಲಾನ್‌ ಬೆಲೆ ಇದೀಗ 179ರೂ.ಗಳಿಗೆ ಏರಿಕೆಯಾಗಿದೆ. ಇನ್ನು ಈ ಪ್ಲಾನ್‌ನಲ್ಲಿ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌, 300 SMS ಹಾಗೂ 2GB Data ಪ್ರಯೋಜನ ದೊರೆಯಲಿದೆ. ಇದಲ್ಲದೆ 219ರೂ.ಬೆಲೆಯ ಪ್ಲಾನ್‌ ಇದೀಗ 269ರೂ.ಬೆಲೆ ಪಡೆದಿದೆ. ಇದರಲ್ಲಿ ಅನಿಯಮಿತ ಕರೆ, ದಿನಕ್ಕೆ 100 SMS ಹಾಗೂ ದೈನಂದಿನ 1GB ಡೇಟಾ ಪ್ರಯೋಜನ ದೊರೆಯಲಿದೆ. ಈ ಎಲ್ಲಾ ಪ್ಲಾನ್‌ಗಳು 28ದಿನಗಳ ಮಾನ್ಯತೆ ಪಡೆದಿವೆ.

ವಿ ಟೆಲಿಕಾಂ 249ರೂ. ಪ್ರಿಪೇಯ್ಡ್‌ ಪ್ಲಾನ್ ಬೆಲೆ ಇದೀಗ 299ರೂ.ಗೆ ಏರಿಕೆ

ವಿ ಟೆಲಿಕಾಂ 249ರೂ. ಪ್ರಿಪೇಯ್ಡ್‌ ಪ್ಲಾನ್ ಬೆಲೆ ಇದೀಗ 299ರೂ.ಗೆ ಏರಿಕೆ

ವಿ ಟೆಲಿಕಾಂ 249ರೂ. ಪ್ಲ್ಯಾನ್ ಬೆಲೆ ಇದೀಗ 299ರೂ.ಗೆ ಏರಿಕೆಯಾಗಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ ಅಲ್ಪಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವೀಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಪಡೆದಿದೆ.

ವಿ ಟೆಲಿಕಾಂ 299ರೂ. ಪ್ಲಾನ್ ಇದೀಗ 359ರೂ.

ವಿ ಟೆಲಿಕಾಂ 299ರೂ. ಪ್ಲಾನ್ ಇದೀಗ 359ರೂ.

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, ಪ್ರತಿದಿನ ಬೆಳಿಗ್ಗೆ 12 ರಿಂದ ಬೆಳಿಗ್ಗೆ 6 ರವರೆಗೆ ಅನಿಯಮಿತ ಡೇಟಾ ಬಳಕೆಗೆ ಲಭ್ಯ ಹಾಗೂ ವೀಕೇಂಡ್‌ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಇದೆ. ಇದರೊಂದಿಗೆ ವಿ ಟೆಲಿಕಾಂನ ಆಪ್ಸ್‌ಗಳ ಸೇವೆ ಸಹ ದೊರೆಯುತ್ತದೆ.

ವಿ ಟೆಲಿಕಾಂ 399ರೂ. ಪ್ಲಾನ್ ಬೆಲೆ 479ರೂ.ಗಳಿಗೆ ಏರಿಕೆ

ವಿ ಟೆಲಿಕಾಂ 399ರೂ. ಪ್ಲಾನ್ ಬೆಲೆ 479ರೂ.ಗಳಿಗೆ ಏರಿಕೆ

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವಿ ಟೆಲಿಕಾಂ 449ರೂ. ಪ್ಲಾನ್ ಬೆಲೆ ಇದೀಗ 539ರೂ.

ವಿ ಟೆಲಿಕಾಂ 449ರೂ. ಪ್ಲಾನ್ ಬೆಲೆ ಇದೀಗ 539ರೂ.

ಈ ಪ್ಲ್ಯಾನ್‌ನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 699ರೂ. ಪ್ರಿಪೇಯ್ಡ್ ಪ್ಲಾನ್ ಬೆಲೆಯನ್ನು 839ರೂ.ಗಳಿಗೆ ಹೆಚ್ಚಿಸಲಾಗಿದೆ

ವಿ ಟೆಲಿಕಾಂ 699ರೂ. ಪ್ರಿಪೇಯ್ಡ್ ಪ್ಲಾನ್ ಬೆಲೆಯನ್ನು 839ರೂ.ಗಳಿಗೆ ಹೆಚ್ಚಿಸಲಾಗಿದೆ

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 1499ರೂ. ಪ್ಲಾನ್ ಬೆಲೆ ಇದೀಗ 1799ರೂ.ಗೆ ಏರಿಕೆ.

ವಿ ಟೆಲಿಕಾಂ 1499ರೂ. ಪ್ಲಾನ್ ಬೆಲೆ ಇದೀಗ 1799ರೂ.ಗೆ ಏರಿಕೆ.

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ವಿ ಟೆಲಿಕಾಂ ಆಪ್‌ ಸೇವೆ ಲಭ್ಯ. ಹೆಚ್ಚಿನ ಡೇಟಾ ಅಗತ್ಯ ಇರದ ಆದರೆ ವಾರ್ಷಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತ ಎನಿಸಲಿದೆ.

ವಿ ಟೆಲಿಕಾಂ 2399ರೂ. ಪ್ರಿಪೇಯ್ಡ್ ಪ್ಲಾನ್ ಬೆಲೆ ಇದೀಗ 2899ರೂ.ಗಳಿಗೆ ಏರಿಕೆ

ವಿ ಟೆಲಿಕಾಂ 2399ರೂ. ಪ್ರಿಪೇಯ್ಡ್ ಪ್ಲಾನ್ ಬೆಲೆ ಇದೀಗ 2899ರೂ.ಗಳಿಗೆ ಏರಿಕೆ

ವಿ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯು 1.5GB ದೈನಂದಿನ ಡೇಟಾವನ್ನು ಅನಿಯಮಿತ ಕರೆಗಳೊಂದಿಗೆ ನೀಡುತ್ತದೆ ಮತ್ತು 365 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಆಲ್-ನೈಟ್ ಹೈಸ್ಪೀಡ್ ಡೇಟಾ ಮತ್ತು ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಕ್ಕೂ ಪ್ರವೇಶವನ್ನು ನೀಡುತ್ತದೆ.

ವಿ ಟೆಲಿಕಾಂ

ಇದಲ್ಲದೆ ವಿ ಟೆಲಿಕಾಂ ಇನ್ನು ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ಆದರೆ ಪ್ರಯೋಜನಗಳಲ್ಲಿ ಯಾವುದೇ ಬದಲಾವಣೆಯನ್ನು ಘೋಷಣೆ ಮಾಡಿಲ್ಲ. ಇನ್ನು
ಭಾರತದಲ್ಲಿ ಏರ್‌ಟೆಲ್ ಟೆಲಿಕಾಂ ಕೂಡ ತನ್ನ ಪ್ರಿಪೇಯ್ಡ್ ಪ್ಲಾನ್ ಬೆಲೆಗಳನ್ನು ಹೆಚ್ಚಿಸಿದೆ. ಈ ಹೊಸ ಬೆಲೆಗಳು ನಾಳೆ ನವೆಂಬರ್ 26 ರಿಂದ ಜಾರಿಗೆ ಬರಲಿದೆ. ಆದರೆ ರಿಲಯನ್ಸ್ ಜಿಯೋ ತನ್ನ ಸುಂಕದ ಯೋಜನೆಗಳನ್ನು ಹೆಚ್ಚಿಸುವ ಕುರಿತು ಯಾವುದೇ ಮಾಹಿತಿ ಇಲ್ಲ. ಏರ್‌ಟೆಲ್ ಮತ್ತು ವಿ ಈಗಾಗಲೇ ತಮ್ಮ ಬೆಲೆಗಳನ್ನು ಹೆಚ್ಚಿಸಿರುವುದರಿಂದ, ಜಿಯೋ ಕೂಡ ಇದೇ ಮಾರ್ಗವನ್ನು ಅನುಸರಿಸುವ ಸಾಧ್ಯತೆಯಿದೆ.

Best Mobiles in India

English summary
The increased Vi plans come into effect starting today.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X