Yuvanidhi: ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ! ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗ್ತಿದೆ. ಯುವಜನರನ್ನೇ ಗುರುಯಾಗಿರಿಸಿಕೊಂಡಿರುವ ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ.
ಹೌದು, ಇಂದು (ಡಿ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2024ರ ಜನವರಿ 12ರಂದು ಹಣ ಜಮಾವಣೆ ಆಗಲಿದೆ. ಹಾಗಾದ್ರೆ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಯುವನಿಧಿ ಯೋಜನೆಯನ್ನು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಚಾಲನೆ ನೀಡಲಾಗುತ್ತಿದೆ. ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇನ್ನು ಯುವನಿಧಿ ಯೋಜನೆಯು 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ.
ಯುವನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಯುವನಿಧಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://sevasindhu.karnataka.gov.in ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ ಎಂದು ಸರ್ಕಾರ ಹೇಳಿದೆ.

ಯುವನಿಧಿ ಯೋಜನೆಯ ಲಾಭಗಳೇನು?
ಯುವನಿಧಿ ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.
ಇನ್ನು ಈ ಯೋಜನೆಯು ಕರ್ನಾಟಕ ರಾಜ್ಯದ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಅನ್ವಯ. ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಯುವನಿಧಿ ಯೋಜನೆ ಹಣವನ್ನು ಡಿಬಿಟಿ ಮೂಲಕ ಒದಗಿಸದಿದ್ದರೆ. ಅರ್ಜಿ ಸಲ್ಲಿಸುವ ಮುನ್ನ ಇದರ ಬಗ್ಗೆ ಗಮನವಿರಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವವರು ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಇದ್ದರೂ ಕೂಡ ಯುವನಿಧಿ ಯೋಜನೆ ಲಾಭವನ್ನು ಮುಂದುವರಿಸಿಕೊಂಡು ಹೋದರೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದೇ ಕಾರಣಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾವು ನಿರುದ್ಯೋಗಿಗಳೆಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು, ಹೆಚ್ಚಿನ ಪ್ರಮಾಣವನ್ನು ಸಲ್ಲಿಸಬೇಕು. ಇನ್ನೂ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಜೊತೆಗೆ ತಾವು ಉತ್ತರಿಸಿದ ದಿನಾಂಕದಿಂದ 6 ತಿಂಗಳಿನಿಂದ ತಮ್ಮ ಅಧಿಕೃತ ಬ್ಯಾಂಕ್ ಖಾತೆಯ ವಹಿವಾಟು ಸ್ಟೇಟ್‌ಮೆಂಟ್ ಪ್ರತಿಯನ್ನು ಸಲ್ಲಿಸಲಾಗಿದೆ. ಇದು ಕಡ್ಡಾಯವಾಗಿದೆ, ಒಂದು ವೇಳೆ ಬ್ಯಾಂಕ್‌ಗೆ ಪ್ರತಿ ಸಲ್ಲಿಸದಿದ್ದರೆ ಅರ್ಜಿ ತಿರಸ್ಕಾರವಾಗುತ್ತದೆ.
ಇವರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ
ಯುವನಿಧಿ ಯೋಜನೆಯ ಲಾಭ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದವರಿಗೆ ದೊರೆಯುವುದಿಲ್ಲ. ಅಲ್ಲದೆ ಅಪ್ರೆಂಟಿಸ್ ಹುದ್ದೆಯಲ್ಲಿರುವವರಿಗೆ ಕೂಡ ಈ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗಿದೆ.


Click it and Unblock the Notifications








