ZTE ಕಂಪೆನಿಯ ZTE ಆಕ್ಸಾನ್‌ 11 5G ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಚೀನಾ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ ZTE ತನ್ನ ಹೊಸ ಸರಣಿಯ ಸ್ಮಾರ್ಟ್‌ಫೋನ್‌ ಅನ್ನು ಚೀನಾದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈಗಾಗ್ಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಟೆಕ್‌ವಲಯದಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿರುವ ZTE ಇದೀಗ ತನ್ನ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಮೂಲಕ ಚೀನಾ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆಯನ್ನ ಹುಟ್ಟುಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765G SoC ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹೌದು

ಹೌದು, ಚೀನಾದ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ZTE ತನ್ನ ಹೊಸ ಆವೃತ್ತಿಯ ZTE ಆಕ್ಸಾನ್‌ 11 5G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಹೊಸ ಆಕರ್ಷಕ ಫೀಚರ್ಸ್‌ಗಳನ್ನ ಒಳಗೊಂಡಿರುವ ಸ್ಮಾರ್ಟ್‌ಫೋನ್‌ ಆಗಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ನಿರೀಕ್ಷೆಯನ್ನ ಹುಟ್ಟುಹಾಕಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಅಲ್ಲದೆ ವಾಟರ್‌ಡ್ರಾಪ್-ನಾಚ್ ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ZTE ಆಕ್ಸಾನ್‌ 11 5G ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.47 ಇಂಚಿನ ಬಾಗಿದ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು, ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಆಗಿದೆ. ಜೊತೆಗೆ ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌ ಅನ್ನು ಸಹ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765G SoC ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಮಿಫೇವರ್ 10 ಆಪರೇಟಿಂಗ್ ಸಿಸ್ಟಂ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೆ 6GB RAM + 128GB, 8GBRAM + 128GB ಹಾಗೂ 8GBRAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನು 2TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ರಿಯರ್‌ ಕ್ಯಾಮೆರಾದಲ್ಲಿ 4k-ರೆಸಲ್ಯೂಶನ್ ವೀಡಿಯೊಗಳನ್ನು 60fps ನಲ್ಲಿ ಸೆರೆಹಿಡಿಯ ಬಹುದಾಗಿದೆ. ಇದಲ್ಲದೆ ಈ 20 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಜೊತೆಗೆ ಈ ಫೋನ್‌ನಲ್ಲಿ ವೀಡಿಯೊ ಎಡಿಟಿಂಗ್ ಸಾಫ್ಟ್‌ವೇರ್ ಸಹ ಇದ್ದು, ಇದು ವಿವಿಧ ರೀತಿಯ ವೀಡಿಯೊ ಎಡಿಟಿಂಗ್ ಟೂಲ್ಸ್‌ಗಳನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ZTE ಆಕ್ಸಾನ್ 11 5G ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಕ್ವಿಕ್‌ ಚಾರ್ಜಿಂಗ್‌ಬೆಂಬಲವನ್ನು ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹೈಬ್ರಿಡ್ ಸಿಮ್ ಸ್ಲಾಟ್, ಬ್ಲೂಟೂತ್ 5.1, ಎನ್‌ಎಫ್‌ಸಿ, ಕ್ವಿಕ್ ಚಾರ್ಜ್ 4+ ಆಯ್ಕೆ, ಮತ್ತು ಇಯರ್‌ಫೋನ್‌ಗಳ ಮೂಲಕ ಹೈ-ಫೈ ಆಡಿಯೊವನ್ನು ಬೆಂಬಲಿಸಲಿದೆ. ಜೊತೆಗೆ ಇನ್‌ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ZTE ಆಕ್ಸಾನ್‌ 11 5G ಸ್ಮಾರ್ಟ್‌ಫೋನ್‌ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಿದ್ದು, 6GB RAM + 128GB ಬೇಸ್‌ ಮಾಡೆಲ್‌ ಬೆಲೆ ಬೆಲೆ CNY 2698 (ಅಂದಾಜು 28,890ರೂ,) ಮತ್ತು 8GB RAM + 128GB ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ CNY 2998 (ಅಂದಾಜು 32,100 ರೂ.) ಹಾಗೂ 8GB RAM + 256GB ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ CNY 3398 (ಸುಮಾರು ರೂ. 36,390) ಆಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

Best Mobiles in India

English summary
ZTE Axon 11 5G will be available in three storage variants and single black colour option.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X