ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ ಬಿಡುಗಡೆ!..ಅಂಡರ್-ಡಿಸ್ಪ್ಲೇ ಕ್ಯಾಮೆರಾ ವಿಶೇಷ!

|

ಟೆಕ್‌ ವಲಯದಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳಿವೆ. ಪ್ರತಿನಿತ್ಯವೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೆ ಇವೆ. ಇವುಗಳಲ್ಲಿ ಜನಪ್ರಿಯ ZTE ಸ್ಮಾರ್ಟ್‌ಫೋನ್‌ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು "ಮುಂದಿನ ಪೀಳಿಗೆಯ ಅಂಡರ್-ಡಿಸ್ಪ್ಲೇ ಕ್ಯಾಮೆರಾ" ಎಂದು ಕಂಪೆನಿ ಹೇಳಿಕೊಂಡಿದೆ.

ZTE ಆಕ್ಸಾನ್ 30 5G

ಹೌದು, ZTE ಕಂಪೆನಿ ಹೊಸ ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಆಗಿದ್ದು, ಅಂಡರ್‌ ಡಿಸ್‌ಪ್ಲೇ ಕ್ಯಾಮೆರಾ ಹೊಂದಿದೆ. ಈ ಹೊಸ ತಂತ್ರಜ್ಞಾನಕ್ಕೆ ಸ್ಮಾರ್ಟ್‌ಫೋನ್ ನಿಜವಾದ ಪೂರ್ಣಪರದೆ ಅನುಭವವನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯದ 6.92-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20.5: 9 ಸಿನೆಮಾ-ದರ್ಜೆಯ ರಚನೆಯ ಅನುಪಾತದೊಂದಿಗೆ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 360Hz ನ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಹೊಸ ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಮೈಓಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು 5GB ವರೆಗೆ ವಿಸ್ತರಿಸಲು ಉಚಿತ ಶೇಖರಣಾ ಸ್ಥಳವನ್ನು ಬಳಸುತ್ತದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ 120 ಡಿಗ್ರಿ ಫೀಲ್ಡ್ ವ್ಯೂ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 55W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರಲ್ಲಿ "ಟ್ರಿಪಲ್ ಐಸ್ ಕೂಲಿಂಗ್ ಸಿಸ್ಟಮ್" ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ 6, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು ಬ್ಲೂಟೂತ್ ವಿ 5.1 ಸೇರಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ZTE ಆಕ್ಸಾನ್ 30 5G ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 6GB RAM+ 128GB ಶೇಖರಣಾ ರೂಪಾಂತರದ ಬೆಲೆ ಸಿಎನ್‌ವೈ 2,198 (ಸುಮಾರು ರೂ. 25,000), 8GB RAM + 128GB ಶೇಖರಣಾ ಮಾದರಿಯ ಬೆಲೆ ಸಿಎನ್‌ವೈ 2,498 (ಸರಿಸುಮಾರು ರೂ. 28,500), 8 GB RAM+ 256 GB ಶೇಖರಣಾ ರೂಪಾಂತರವನ್ನು ಸಿಎನ್‌ವೈ 2,798 ( ಸರಿಸುಮಾರು ರೂ. 32,000) ಬೆಲೆ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಅನ್ನು ಶೀಘ್ರದಲ್ಲೇ ಜಾಗತಿಕವಾಗಿ ಬಿಡುಗಡೆ ಮಾಡುವುದಾಗಿ ZTE ಕಂಪೆನಿ ಘೋಷಿಸಿದೆ.

Most Read Articles
Best Mobiles in India

English summary
ZTE Axon 30 5G has been launched in China and it comes with what the company claims to be a “next-generation under-display camera.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X