ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ ಲಾಂಚ್: ಬೆಲೆ ಎಷ್ಟು?
ZTE ಮೊಬೈಲ್ ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಮುಖ್ಯವಾಗಿ ತನ್ನ ಬಜೆಟ್ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಇದೀಗ ಹೊಸದಾಗಿ ZTE ಆಕ್ಸಾನ್ ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಅವುಗಳು ಕ್ರಮವಾಗಿ ZTE ಆಕ್ಸಾನ್ 30 ಅಲ್ಟ್ರಾ 5G ಮತ್ತು ZTE ಆಕ್ಸಾನ್ 30 ಪ್ರೊ 5G ಆಗಿವೆ.

ಹೌದು, ZTE ಕಂಪೆನಿಯು ನೂತನವಾಗಿ ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಅನ್ನು ಒಳಗೊಂಡಿದ್ದು, AMOLED ಮಾದರಿಯ ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಎಂಪಿ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಇನ್ನುಳಿದಂತೆ ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ
ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.7 ಇಂಚಿನ ಹೆಚ್‌ಡಿ ಪ್ಲಸ್ ಕರ್ವ್ಡ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಹಾಗೆಯೇ ಈ ಫೋನ್ ಡಿಸ್‌ಪ್ಲೇಯ ರೀಫ್ರೇಶ್ ರೇಟ್ 120Hz ಆಗಿದೆ.

ಪ್ರೊಸೆಸರ್ ಕಾರ್ಯ
ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ. ಹಾಗೇಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್
ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸೋನಿ ಐಎಂಎಕ್ಸ್ 682 ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಕ್ವಾಲ್ಕಾಮ್ ಕ್ವಿಕ್‌ಚಾರ್ಜ್ 4.0+ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ 6 ಇ ಮತ್ತು ಎನ್‌ಎಫ್‌ಸಿ ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ZTE ಆಕ್ಸಾನ್ 30 ಪ್ರೊ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM + 128 GB ಆಯ್ಕೆಗೆ ಚೀನಾದಲ್ಲಿ ಬೆಲೆ ಸಿಎನ್‌ವೈ 2,998 (ಸರಿಸುಮಾರು ರೂ. 34,000)ಹೊಂದಿದೆ. ಇನ್ನು 8GB RAM + 128GB ಶೇಖರಣಾ ರೂಪಾಂತದ ಆಯ್ಕೆಗೆ ಸಿಎನ್‌ವೈ 3,298 (ಸರಿಸುಮಾರು ರೂ. 37,500) ಮತ್ತು ಟಾಪ್-ಆಫ್-ಲೈನ್ ಮಾದರಿಯೊಂದಿಗೆ ಖರೀದಿಸಬಹುದು. ಚೀನಾದಲ್ಲಿ 8GB RAM + 256 GB ಶೇಖರಣಾ ಬೆಲೆಯನ್ನು ಸಿಎನ್‌ವೈ 3,598 (ಸರಿಸುಮಾರು ರೂ. 41,000) ಎಂದು ನಿಗದಿಪಡಿಸಲಾಗಿದೆ. ಈ ಹ್ಯಾಂಡ್‌ಸೆಟ್ ಅನ್ನು ಬ್ಲ್ಯಾಕ್ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ ಮತ್ತು ಏಪ್ರಿಲ್ 19 ರಿಂದ ಪ್ರೀ-ಆರ್ಡರ್‌ಗೆ ಲಭ್ಯವಿರುತ್ತದೆ.


Click it and Unblock the Notifications








