ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ZTE ಮೊಬೈಲ್ ಕಂಪನಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಹೊಸದಾಗಿ ZTE ಆಕ್ಸಾನ್ ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ZTE ಆಕ್ಸಾನ್ 30 ಅಲ್ಟ್ರಾ 5G ಮತ್ತು ZTE ಆಕ್ಸಾನ್ 30 ಪ್ರೊ 5G ಎಂದು ಹೆಸರಿಸಲಾಗಿದೆ.

ZTE

ಹೌದು, ZTE ಸಂಸ್ಥೆ ಹೊಸದಾಗಿ ZTE ಆಕ್ಸಾನ್ 30 ಅಲ್ಟ್ರಾ 5G ಮತ್ತು ZTE ಆಕ್ಸಾನ್ 30 ಪ್ರೊ 5G ಎಂಬ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಇದರಲ್ಲಿ ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ. ಹಾಗಾದ್ರೆ ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 144Hz ರಿಫ್ರೆಶ್ ದರವನ್ನು ಹೊಂದಿದ್ದು ಅದು "ವಿಭಿನ್ನ ಅಪ್ಲಿಕೇಶನ್ ಸನ್ನಿವೇಶಗಳಿಗಾಗಿ" ಆಟೋಮ್ಯಾಟಿಕ್‌ ಆಗಿ ಸೆಟ್‌ ಮಾಡಬಲ್ಲದು. ಇದು 300Hz ನ ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದ್ದು, ಹೆಚ್‌ಡಿಆರ್ 10 + ಅನ್ನು ಬೆಂಬಲಿಸುತ್ತದೆ. ಇನ್ನು ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಮೈಓಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+ 256GB ಮತ್ತು 12GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಯನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64-ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 64 ಮೆಗಾಪಿಕ್ಸಲ್‌ ಕ್ಯಾಮೆರಾ ಹಾಗೂ ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದರಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ಕ್ವಾಲ್ಕಾಮ್ ಕ್ವಿಕ್‌ಚಾರ್ಜ್ 4.0+ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ 6 ಇ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು ಎನ್‌ಎಫ್‌ಸಿ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ZTE ಆಕ್ಸಾನ್ 30 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ 8GB RAM+ 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ರೂಪಾಂತರದ ಬೆಲೆ ಸಿಎನ್‌ವೈ 4,698 (ಅಂದಾಜು 53,700 ರೂ.), 12GB RAM + 256GB ಇಂಟರ್‌ ಸ್ಟೋರೇಜ್‌ ರೂಪಾಂತರದ ಬೆಲೆ ಸಿಎನ್‌ವೈ 4,998 (ಅಂದಾಜು 57,100 ರೂ.)ಆಗಿದೆ. ಜೊತೆಗೆ 16 GB + ಹೊಂದಿರುವ ಟಾಪ್-ಆಫ್-ಲೈನ್ ಮಾದರಿ 1 ಟಿಬಿ ಸಂಗ್ರಹವನ್ನು ಚೀನಾದಲ್ಲಿ ಸಿಎನ್‌ವೈ 6,666 (ಸರಿಸುಮಾರು 76,200 ರೂ.) ನಲ್ಲಿ ಖರೀದಿಸಬಹುದು. ಇದನ್ನು ಬ್ಲ್ಯಾಕ್, ಮಿಂಟ್, ವೈಟ್ ಮತ್ತು ಲೆದರ್ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿದೆ. ಚೀನಾದಲ್ಲಿ ಏಪ್ರಿಲ್ 19 ರಿಂದ ಪ್ರೀ-ಆರ್ಡರ್‌ಗೆ ಲಭ್ಯವಾಗಲಿದೆ.

Best Mobiles in India

English summary
ZTE Axon 30 Ultra 5G Smartphone Launched:Price, Specifications.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X