Home
ಸುದ್ದಿಜಾಲ

ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ZTE ಕೂಡ ಒಂದಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಹೊಸ ZTE ಆಕ್ಸಾನ್(Axon) 40 SE ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಯುನಿಸೋಕ್‌ T618 SoC ಪ್ರೊಸೆಸರ್‌ ವೇಗವನ್ನು ಒಳಗೊಂಡಿದೆ. ಇನ್ನು ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ZTE

ಹೌದು, ZTE ಕಂಪೆನಿ ಹೊಸ ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಅಂತರ್ಗತ RAM ಅನ್ನು ವಾಸ್ತವಿಕವಾಗಿ ಬಳಸಿಕೊಂಡು ಇನ್ನೂ 2GB ವರೆಗೆ RAM ಅನ್ನು ವಿಸ್ತರಿಸಬಹುದಾಗಿದೆ. ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ ಬ್ಲಾಕ್‌ ಮತ್ತು ಬ್ಲೂ ಶೇಡ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 395 PPI ಪಿಕ್ಸೆಲ್‌ ಸಾಂಧ್ರತೆಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 120Hz ರಿಪ್ರೆಶ್‌ ರೇಟ್‌ ಹೊಂದಿದ್ದು, HDR10+ ಬೆಂಬಲವನ್ನು ಒಳಗೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸೋಕ್‌ T618 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದರಲ್ಲಿ RAM ಅನ್ನು 2GB ವರೆಗೆ ವಿಸ್ತರಿಸಬಹುದದಾಗಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನು?

ಕ್ಯಾಮೆರಾ ಸೆಟ್‌ಅಪ್‌ ಏನು?

ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 4,500mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5 ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಕಂಪಾಸ್‌, ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ZTE ಆಕ್ಸಾನ್‌ 40 SE ಸ್ಮಾರ್ಟ್‌ಫೋನ್‌ ಪ್ರಸ್ತುತ ಮೆಕ್ಸಿಕೋದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಮೆಕ್ಸಿಕೋದಲ್ಲಿ MXN 5,999 (ಸುಮಾರು 24,700ರೂ)ಬೆಲೆಯನ್ನು ಪಡೆದಿದೆ. ಇದು ಕಪ್ಪು ಮತ್ತು ಬ್ಲೂ ಶೇಡ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ ಎಂದು ವರದಿಯಾಗಿದೆ.

Best Mobiles in India

English summary
ZTE Axon 40 SE With Triple Rear Camera Launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+