ZTE ಆಕ್ಸಾನ್ 20 ಫೋನ್‌ ಲಾಂಚ್‌!.ಅಂಡರ್-ಡಿಸ್ಪ್ಲೇ ಸೆಲ್ಫಿ ಕ್ಯಾಮೆರಾ ವಿಶೇಷ!

|

ZTE ಮೊಬೈಲ್ ಕಂಪನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ಹಲವು ಬಜೆಟ್‌ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಇದೀಗ ಹೊಸದಾಗಿ ZTE ಬ್ಲೇಡ್ 20 ಪ್ರೊ 5G ಮತ್ತು ZTE ಬ್ಲೇಡ್ ಆಕ್ಸಾನ್ 20 4G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಇನ್ನು ZTE ಆಕ್ಸಾನ್‌ 20 5G ಸ್ಮಾರ್ಟ್‌ಫೋನ್‌ ಅಂಡರ್‌ ಡಿಸ್‌ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಹೌದು, ZTE ಬ್ಲೇಡ್ 20 ಪ್ರೊ 5G ಮತ್ತು ZTE ಬ್ಲೇಡ್ ಆಕ್ಸಾನ್ 20 4G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಆಕ್ಟಾ-ಕೋರ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಒಳಗೊಂಡಿರುವ ಇತರೆ ಫೀಚರ್ಸ್‌ಗಳು ಹೇಗಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ZTE ಬ್ಲೇಡ್ 20 ಪ್ರೊ 5G ವಿಶೇಷತೆ

ZTE ಬ್ಲೇಡ್ 20 ಪ್ರೊ 5G ವಿಶೇಷತೆ

ZTE ಬ್ಲೇಡ್ 20 ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 765 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಅಡ್ರಿನೊ 620 ಜಿಪಿಯುನಿಂದ ನಿಯಂತ್ರಿಸಲ್ಪಡುತ್ತದೆ. ಹಾಗೇಯೆ ಈ ಫೋನ್ 6GB RAM ಮತ್ತು 128GB ಸ್ಟೋರೇಜ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ZTE ಆಕ್ಸಾನ್ 20 4G ವಿಶೇಷತೆ

ZTE ಆಕ್ಸಾನ್ 20 4G ವಿಶೇಷತೆ

ZTE ಆಕ್ಸಾನ್ 20 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸಾಕ್ ಟೈಗರ್ T618 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಂಡರ್-ಡಿಸ್ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಉಳಿಸಿಕೊಂಡಿದೆ. ಇದು ಕೂಡ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ವಾಟರ್ನರಿ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ZTE ಬ್ಲೇಡ್ 20 ಪ್ರೊ 5G

ಇನ್ನು ZTE ಬ್ಲೇಡ್ 20 ಪ್ರೊ 5G ಮತ್ತು ZTE ಬ್ಲೇಡ್ ಆಕ್ಸಾನ್ 20 4G ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಬೆಲೆಯ ಬಗ್ಗೆ ಕಂಪನಿಯು ಇನ್ನು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜೊತೆಗೆ ಈ ಎರಡು ಫೋನ್‌ಗಳು ಯಾವಾಗ ಭಾರತೀಯ ಮಾರುಕಟ್ಟೆಗೆ ಬರುತ್ತವೆ ಎಂಬುದರ ಬಗ್ಗೆ ಇನ್ನು ಸ್ಪಷ್ಟವಾಗಿಲ್ಲ.

Most Read Articles
Best Mobiles in India

English summary
ZTE Blade 20 5G is powered by the MediaTek Dimensity 720 SoC while the newer Pro variant features the Snapdragon 765G SoC.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X