ZTE ಮೊಬೈಲ್ ಕಂಪೆನಿಯಿಂದ ಹೊಸ ಸ್ಮಾರ್ಟ್‌ಫೋನ್‌ಗಳ ಅನಾವರಣ! ವಿಶೇಷತೆ ಏನು?
ZTE ಮೊಬೈಲ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಕೆಲವು ಆಯ್ದ ಮಾರುಕಟ್ಟೆಗಳಲ್ಲಿ ತನ್ನ ಹೊಸ ZTE ಬ್ಲೇಡ್ A52 ಮತ್ತು ಬ್ಲೇಡ್A72 ಹಾಗೂ ಬ್ಲೇಡ್ A72 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ZTE ಬ್ಲೇಡ್ A72 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಒಳಗೊಂಡಿದೆ.

ಹೌದು, ZTE ಕಂಪೆನಿ ಹೊಸದಾಗಿ ಪರಿಚಯಿಸಿರುವ ಸ್ಮಾರ್ಟ್‌ಫೋನ್‌ಗಳು ವಿಶೇಷ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಈ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇನ್ನು ZTE ಕಂಪೆನಿಯ ಹೊಸ ಸ್ಮಾರ್ಟ್‌ಫೋನ್‌ಗಳು ಸಿಲ್ಕ್ ಗೋಲ್ಡ್ ಮತ್ತು ಸ್ಪೇಸ್ ಗ್ರೇ, ಸ್ಕೈಲೈನ್ ಬ್ಲೂ,ನೀಲಿ ಮತ್ತು ಬೂದು ಬಣ್ಣಗಳ ಆಯ್ಕೆಯಲ್ಲಿ ಬರಲಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ZTE ಬ್ಲೇಡ್ A52
ZTE ಬ್ಲೇಡ್ A52 ಸ್ಮಾರ್ಟ್‌ಫೋನ್ 6.52 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಮೈಕ್ರೋ USB ಪೋರ್ಟ್, NFC, Wi-Fi ಮತ್ತು 3.5mm ಹೆಡ್‌ಫೋನ್ ಪೋರ್ಟ್ ಅನ್ನು ಬೆಂಬಲಿಸಲಿದೆ.

ZTE ಬ್ಲೇಡ್ A72
ZTE ಬ್ಲೇಡ್ A72 ಸ್ಮಾರ್ಟ್‌ಫೋನ್ 6.7 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್ ಬೆಂಬಲಸಿಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C ಪೋರ್ಟ್, Wi-Fi ಮತ್ತು 3.5mm ಹೆಡ್‌ಫೋನ್ ಪೋರ್ಟ್ ಸೇರಿದೆ.

ZTE ಬ್ಲೇಡ್ A72 5G
ZTE ಬ್ಲೇಡ್ A72 5G ಸ್ಮಾರ್ಟ್‌ಫೋನ್ 6.52 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11-ಆಧಾರಿತ MiFavor 11 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್‌ನೊಂದಿಗೆ 1TB ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ZTE ಬ್ಲೇಡ್ A52 ಸ್ಮಾರ್ಟ್‌ಫೋನ್ 2GB RAM + 64GB ಸ್ಟೋರೇಜ್ ಆಯ್ಕೆಯ ಬೆಲೆ MYR 399 (ಅಂದಾಜು 7,000ರೂ) ಗೆ ನಿಗದಿಪಡಿಸಲಾಗಿದೆ. ಇದು ಸಿಲ್ಕ್ ಗೋಲ್ಡ್ ಮತ್ತು ಸ್ಪೇಸ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
ಇನ್ನು ZTE ಬ್ಲೇಡ್ A72 ಸ್ಮಾರ್ಟ್‌ಫೋನ್ 3GB RAM + 32GB ಸ್ಟೋರೇಜ್ ಮಾದರಿಯ ಬೆಲೆ MYR 499 (ಸುಮಾರು 8,800ರೂ)ಆಗಿದೆ. ಇದು ಸ್ಕೈಲೈನ್ ಬ್ಲೂ ಮತ್ತು ಸ್ಪೇಸ್ ಗ್ರೇ ಬಣ್ಣಗಳಲ್ಲಿ ಲಜಾಡಾ ಮತ್ತು ಮಲೇಷಿಯಾದ ಶೋಪಿ ಮಾಲ್‌ನಲ್ಲಿ ಖರೀದಿಗೆ ಲಭ್ಯವಿದೆ.
ಇದರೊಂದಿಗೆ ZTE ಬ್ಲೇಡ್ A72 5G ಫೋನ್ 4GB RAM + 64GB ಸ್ಟೋರೇಜ್ ಮಾದರಿಯ ಬೆಲೆ EUR 199 (ಅಂದಾಜು 16,500ರೂ.)ಗೆ ನಿಗದಿಪಡಿಸಲಾಗಿದೆ. ಇದು ನೀಲಿ ಮತ್ತು ಬೂದು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








