ಮಾರುಕಟ್ಟೆಗೆ ಎಂಟ್ರಿ ಕೊಟ್ಟ ZTE ಬ್ಲೇಡ್ A72s ಸ್ಮಾರ್ಟ್‌ಫೋನ್! ವಿಶೇಷತೆ ಏನು?
ಮೊಬೈಲ್ ಮಾರುಕಟ್ಟೆಯಲ್ಲಿ ZTE ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ತನ್ನ ಬ್ಲೇಡ್ ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ZTE ಬ್ಲೇಡ್ A72s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T606 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ZTE ಕಂಪೆನಿ ಹೊಸ ZTE ಬ್ಲೇಡ್ A72s ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್ ಅನ್ನು ಹೊಂದಿರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 22.5W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ZTE ಬ್ಲೇಡ್ A72s ಡಿಸ್‌ಪ್ಲೇ ವಿವರ
ZTE ಬ್ಲೇಡ್ A72s ಸ್ಮಾರ್ಟ್‌ಫೋನ್ 6.75 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 260 ppi ಸಾಮರ್ಥ್ಯವನ್ನು ಹೊಂದಿದ್ದು, 84.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.
ZTE ಬ್ಲೇಡ್ A72s ಪ್ರೊಸೆಸರ್ ಯಾವುದು?
ZTE ಬ್ಲೇಡ್ A72s ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T606 ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 128GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.
ZTE ಬ್ಲೇಡ್ A72s ಕ್ಯಾಮೆರಾ ಸೆಟ್‌ಅಪ್
ZTE ಬ್ಲೇಡ್ A72s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ZTE ಬ್ಲೇಡ್ A72s ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ZTE ಬ್ಲೇಡ್ A72s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 22.5W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್ ಅನ್ನು ಕೂಡ ಹೊಂದಿದೆ.
ಬೆಲೆ ಮತ್ತು ಲಭ್ಯತೆ
ZTE ಬ್ಲೇಡ್ A72s ಸ್ಮಾರ್ಟ್‌ಫೋನ್ ಪ್ರಸ್ತುತ ಯುರೋಪ್ ಮಾರುಕಟ್ಟೆಯಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೊನ್ ಬೆಲೆ ಯುರೋಪ್‌ನಲ್ಲಿ €170 (ಅಂದಾಜು 15,250ರೂ.) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಪೇಸ್ ಗ್ರೇ ಮತ್ತು ಸ್ಕೈಲೈನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ.
ಇನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ 5G ಶುರುವಾಗುವುದಕ್ಕೂ ಮೊದಲು ಆರ್ಭಟಿಸುತ್ತಿದ್ದ 4G ಸ್ಮಾರ್ಟ್‌ಫೋನ್ ಮಾರುಕಟ್ಟೆ ಇದೀಗ ಭಾರಿ ಹಿನ್ನಡೆ ಅನುಭವಿಸುತ್ತಿದೆ. 5G ಸ್ಮಾರ್ಟ್‌ಫೋನ್ ಮಾರುಕಟ್ಟೆ ದಿನೇ ದಿನೇ ಬೆಳವಣಿಗೆ ಸಾಧಿಸುತ್ತಿದ್ದು 4G ಫೋನ್ ಮಾರಾಟಗಾರರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಬಿಡುಗಡೆಯಾಗಿರುವ 4G ಮೊಬೈಲ್ ಸ್ಟಾಕ್ ಅನ್ನು ತೆರವುಗೊಳಿಸುವುದಕ್ಕೆ ಮಾರಾಟಗಾರರ ಹೆಣಗಾಡುತ್ತಿದ್ದಾರೆ. ಇದೇ ಕಾರಣಕ್ಕೆ ಇತ್ತೀಚಿನ ದಿನಗಳಲ್ಲಿ 4G ಸ್ಮಾರ್ಟ್‌ಫೋನ್‌ಗಳು ಶಾಶ್ವತ ಬೆಲೆ ಕಡಿತವನ್ನು ಪಡೆದುಕೊಳ್ಳುತ್ತಿವೆ ಅನ್ನೊದು ಇಂಟ್ರೆಸ್ಟಿಂಗ್ ವಿಚಾರವಾಗಿದೆ.


Click it and Unblock the Notifications








