Home
ಸುದ್ದಿಜಾಲ

ZTE ಬ್ಲೇಡ್‌ A7s 2020 ಸ್ಮಾರ್ಟ್‌ಫೋನ್‌ ಬಿಡುಗಡೆ!

ZTE ಮೊಬೈಲ್ ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ತನ್ನ ಬಜೆಟ್‌ ಶ್ರೇಣಿಯ ಸ್ಮಾರ್ಟ್‌ಫೊನ್‌ಗಳಿಂದ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಇದೀಗ ಹೊಸದಾಗಿ ZTE ಬ್ಲೆಡ್‌ A7S 2020 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 3GB + 64GB ಸ್ಟೋರೇಜ್‌ ಆಯ್ಕೆ ಹೊಂದಿರುವ ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ZTE ಬ್ಲೆಡ್‌ A7S 2020

ಹೌದು, ZTE ಕಂಪನಿಯು ನೂತನವಾಗಿ ZTE ಬ್ಲೆಡ್‌ A7S 2020 ಸ್ಮಾರ್ಟ್‌ಫೋನ್‌ ಅನ್ನು ಜರ್ಮನಿಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಸಫೋರ್ಟ್‌ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳು ಹೇಗಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ZTE ಬ್ಲೇಡ್‌ A7S 2020 ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.5 ಇಂಚಿನ ಹೆಚ್‌ಡಿ ಪ್ಲಸ್‌ TFT ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 19.5:9 ರಚನೆಯ ಅನುಪಾತವನ್ನು ಹೊಂದಿದ್ದು, 81.4% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾಕೋರ್‌ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಮಿಫಾವರ್ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, 8 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ZTE ಬ್ಲೇಡ್‌ A7S 2020 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4G, ಬ್ಲೂಟೂತ್ 4.2, ಜಿಪಿಎಸ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು 4G ಯಲ್ಲಿರುವಾಗ 27 ಗಂಟೆಗಳವರೆಗೆ ಟಾಕ್ ಟೈಮ್ ನೀಡುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ZTE ಬ್ಲೇಡ್ A7S 2020 ಸ್ಮಾರ್ಟ್‌ಫೋನ್‌ ಯುರೋ 149 (ಸುಮಾರು 13,100 ರೂ.) ಬೆಲೆಯನ್ನು ಹೊಂದಿದೆ. ಇದು ಓಷನ್ ಬ್ಲೂ ಮತ್ತು ಸ್ಟಾರ್ ಬ್ಲ್ಯಾಕ್ ಎಂಬ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
ZTE Blade A7s 2020 has been launched in Germany. It is a budget-friendly smartphone with an octa-core processor, a notch for the selfie shooter, and a triple rear camera setup.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+