ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ ಅನಾವರಣ; ಬೆಲೆ ಎಷ್ಟು?

|

ZTE ಮೊಬೈಲ್ ತಯಾರಿಕಾ ಕಂಪನಿಯು ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಅನಿಸಿಕೊಂಡಿದೆ. ಈ ಸಂಸ್ಥೆಯು ಇದೀಗ ಹೊಸದಾಗಿ ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ, ಪ್ರೊಸೆಸರ್, ಬಿಗ್ ಬ್ಯಾಟರಿ ಹಾಗೂ ಡಿಸೈನ್‌ನಿಂದ ಗ್ರಾಹಕರ ಗಮನ ಸೆಳೆದಿದೆ.

ZTE

ಹೌದು, ZTE ಕಂಪನಿಯು ತನ್ನ ಹೊಸ ZTE ಬ್ಲೆಡ್‌ V2021 5G ಮಾಡೆಲ್‌ ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ 720 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಸಫೋರ್ಟ್‌ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು, 20:9 ಅನುಪಾತ ಪಡೆದಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ 720 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಕ್ವಿಕ್‌ ಚಾರ್ಜಿಂಗ್‌ ಬೆಂಬಲವನ್ನು ಪಡೆದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 5.1, ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್. ಸಂವೇದಕಗಳಲ್ಲಿ ಅಕ್ಸೆಲೆರೊಮೀಟರ್, ಗೈರೊ, ಸಾಮೀಪ್ಯ ಸಂವೇದಕ, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ದಿಕ್ಸೂಚಿ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ZTE ಬ್ಲೆಡ್‌ V2021 5G ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್‌ ಬೆಲೆಯು CNY 999 (ಅಂದಾಜು 11,200ರೂ. ಎನ್ನಲಾಗಿದೆ) ಆಗಿದೆ. ಅದೇ ರೀತಿ 6GB + 128GB ಸ್ಟೋರೇಜ್‌ನ ಬೆಲೆಯು CNY 1,399 (ಅಂದಾಜು 15,700ರೂ. ಎನ್ನಲಾಗಿದೆ). ಭಾರತದ ಮಾರುಕಟ್ಟೆಗೆ ಯಾವಾಗ ಎಂಟ್ರಿ ನೀಡಲಿದೆ ಎನ್ನುವ ಬಗ್ಗೆ ಮಾಹಿತಿ ಹೊರಹಾಕಿಲ್ಲ.

Best Mobiles in India

English summary
ZTE Blade V2021 5G has been launched in China as the latest smartphone offering from the company.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X