MWC 2022: ZTE ಕಂಪೆನಿಯಿಂದ ನಾಲ್ಕು ಹೊಸ ಸ್ಮಾರ್ಟ್‌ಫೋನ್ ಅನಾವರಣ!
ZTE ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಸದ್ಯ ಇದೀಗ ZTE ಮೊಬೈಲ್ ಕಂಪೆನಿ ತನ್ನ ಬ್ಲೇಡ್ V40 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2022ನಲ್ಲಿ ಅನಾವರಣಗೊಳಿಸಿದೆ. ಈ ಸರಣಿಯಲ್ಲಿ ZTE ಬ್ಲೇಡ್ V40 5G, ZTE ಬ್ಲೇಡ್ V40, ZTE ಬ್ಲೇಡ್ V40 ಪ್ರೊ ಮತ್ತು ZTE ಬ್ಲೇಡ್ V40 ವೀಟಾ ಸ್ಮಾರ್ಟ್‌ಫೋನ್ ಗಳನ್ನು ಪರಿಚಯಿಸಿದೆ. ಈ ನಾಲ್ಕು ಸ್ಮಾರ್ಟ್‌ಫೋನ್‌ಗಳಲ್ಲಿ ಒಂದು ಫೋನ್ ಮಾತ್ರ 5G ಮಾದರಿ ಹೊಂದಿದೆ.

ಹೌದು, ZTE ಕಂಪೆನಿ MWC 2022ರಲ್ಲಿ ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ZTE ಬ್ಲೇಡ್ V40 ಸ್ಮಾರ್ಟ್‌ಫೋನ್ ಯೂನಿಸೋಕ್ T618 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಆದರೆ ZTE ಬ್ಲೇಡ್ V40 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 22.5W ವೇಗದ ಚಾರ್ಜಿಂಗ್ ಬೆಂಬಲಿಸುವ 6,000mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ZTE ಬ್ಲೇಡ್ V40 ಸ್ಮಾರ್ಟ್‌ಫೋನ್
ZTE ಬ್ಲೇಡ್ V40 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 92.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದು ಯೂನಿಸೋಕ್ T618 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಆಧರಿಸಿ MyOS 11 ಅನ್ನು ರನ್ ಮಾಡುತ್ತದೆ. ಹಾಗೆಯೇ 4GB RAM ಮತ್ತು 128GB ಸ್ಟೋರೇಜ್ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಕ್ಯಾಮೆರಾವು ಸ್ವಯಂಚಾಲಿತ HDR ಸೆಟ್ಟಿಂಗ್‌ಗಳೊಂದಿಗೆ ಮ್ಯಾಕ್ರೋ ಶೂಟರ್ ಮತ್ತು ಡೆಪ್ತ್ ಕ್ಯಾಮೆರಾವನ್ನು ಸಹ ಪಡೆಯುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ AI ಬ್ಯೂಟಿ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 22.5W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಒಳಗೊಂಡಿದೆ.

ZTE ಬ್ಲೇಡ್ V40 5G ಸ್ಮಾರ್ಟ್‌ಫೋನ್
ZTE ಬ್ಲೇಡ್ V40 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.67-ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಇನ್ನು ಈ ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 360-ಡಿಗ್ರಿ ಇಂಟಿಗ್ರೇಟೆಡ್ ಆಂಟೆನಾ ಸಿಸ್ಟಮ್ ಮತ್ತು ಹೆಚ್ಚಿನ ವೇಗ ಮತ್ತು ಸ್ಥಿರ ಸಂಕೇತಗಳನ್ನು ಒದಗಿಸಲು ಸೌಂಡಿಂಗ್ ರೆಫರೆನ್ಸ್ ಸಿಗ್ನಲ್ ತಂತ್ರಜ್ಞಾನವನ್ನು ಪಡೆದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ZTE ಬ್ಲೇಡ್ V40 ಪ್ರೊ ಸ್ಮಾರ್ಟ್‌ಫೋನ್
ZTE ಬ್ಲೇಡ್ V40 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಫುಲ್ DCI-P3 ವೈಡ್ ಕಲರ್ ಗ್ಯಾಮಟ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಯೂನಿಸೋಕ್ T618 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11-ಆಧಾರಿತ MyOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ZTE ಬ್ಲೇಡ್ V40 ವೀಟಾ ಸ್ಮಾರ್ಟ್‌ಫೋನ್
ZTE ಬ್ಲೇಡ್ V40 ವೀಟಾ ಸ್ಮಾರ್ಟ್‌ಫೋನ್ 6.7 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಇದು ಯುನಿಸೊಕ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 3GB RAM ಮತ್ತು 128GB ಇಂಟರ್ ಸ್ಟೋರೇಜ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ನಾಲ್ಕು ಸ್ಮಾರ್ಟ್‌ಫೋನ್‌ಗಳ ಬೆಲೆ ವಿವರ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ 2022 ರ ಏಪ್ರಿಲ್‌ನಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿರುತ್ತವೆ ಎಂದು ZTE ಕಂಪೆನಿ ಹೇಳಿಕೊಂಡಿದೆ.


Click it and Unblock the Notifications








