ZTE ಬ್ಲೇಡ್ X1 5G ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ZTE ಮೊಬೈಲ್ ಕಂಪನಿ ತನ್ನ ಬಜೆಟ್ ಶ್ರೇಣಿಯ ಸ್ಮಾರ್ಟ್‌ಫೊನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಈ ಸಂಸ್ಥೆಯು ಇದೀಗ ಹೊಸದಾಗಿ ZTE ಬ್ಲೆಡ್ X 1 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ZTE ಸಂಸ್ಥೆ ತನ್ನ ಹೊಸ ಬ್ಲೇಡ್ X1 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಯುಎಸ್‌ನಲ್ಲಿ ಬಿಡುಗಡೆ ಆಗಿದ್ದು, ಮಧ್ಯ ಶ್ರೇಣಿಯ 5G ಸ್ಮಾರ್ಟ್‌ಫೋನ್ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂರು ಬದಿಗಳಲ್ಲಿ ಸ್ಲಿಮ್ ಬೆಜೆಲ್ ಅನ್ನು ಹೊಂದಿದ್ದು, ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ZTE ಬ್ಲೇಡ್ X1 5G ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, 60Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು ಸಿಂಗಲ್ RAM ಆಯ್ಕೆಯಲ್ಲಿ ಲಭ್ಯವಾಗಲಿದ್ದು, 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ZTE ಬ್ಲೇಡ್ X1 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ವಾಟರ್ನರಿ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಕ್ವಿಕ್ ಚಾರ್ಜ್ 3.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಸಬ್ -6 GHz, 5G, LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ZTE ಬ್ಲೇಡ್ X1 5G ಸ್ಮಾರ್ಟ್‌ಫೋನ್ ಯುಎಸ್‌ನಲ್ಲಿ $ 384 ಬೆಲೆಯನ್ನು ಹೊಂದಿದೆ. ಇದು ಸಿಂಗಲ್ ಮಿಡ್‌ನೈಟ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications