ZTE ಸಂಸ್ಥೆಯಿಂದ S30 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ! ಆಕರ್ಷಕ ಫೀಚರ್ಸ್!
ZTE ಮೊಬೈಲ್ ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ತನ್ನ ಬಜೆಟ್ ಶ್ರೇಣಿಯ ಸ್ಮಾರ್ಟ್‌ಫೊನ್‌ಗಳಿಂದ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಇದೀಗ ಹೊಸದಾಗಿ ZTE S30, ZTE S30 Pro, ಮತ್ತು ZTE S30 SE ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಪಂಚ್-ಹೋಲ್- ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿವೆ. ಅಲ್ಲದೆ 5G ಬೆಂಬಲಿತ ಚಿಪ್‌ಸೆಟ್‌ಗಳನ್ನು ಹೊಂದಿವೆ.

ಹೌದು, ZTE ಮೊಬೈಲ್ ಕಂಪೆನಿ ZTE S30, ZTE S30 Pro, ಮತ್ತು ZTE S30 SE ಸ್ಮಾರ್ಟ್‌ಫೋನ್‌ಗಳನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಇದರಲ್ಲಿ ZTE S30 Pro ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G SoC ಅನ್ನು ಹೊಂದಿದ್ದರೆ, ZTE S30 ಮತ್ತು ZTE S30 SE ಮಾದರಿಗಳು ಕ್ರಮವಾಗಿ ಮೀಡಿಯಾ ಟೆಕ್ ಡೈಮೆನ್ಸಿಟಿ 720 ಮತ್ತು ಡೈಮೆನ್ಸಿಟಿ 700 ಅನ್ನು ಹೊಂದಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ZTE S30 ಡಿಸ್‌ಪ್ಲೇ
ZTE S30 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 20: 9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.

ಕ್ವಾಡ್ ರಿಯರ್ ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ZTE S30 ಸ್ಮಾರ್ಟ್‌ಫೋನ್4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 802.11 ಎಸಿ, ಬ್ಲೂಟೂತ್ 5.1, GPS, USBಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ZTE S30 ಪ್ರೊ
ZTE S30 ಪ್ರೊ ಸ್ಮಾರ್ಟ್‌ಫೋನ್ 6.67-ಇಂಚಿನ ಫುಲ್-ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಇದು 4,200mAh ಬ್ಯಾಟರಿಯನ್ನು ಹೊಂದಿದ್ದು, ಇದು 55W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ZTE S30 SE
ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ZTE S30 ಸ್ಮಾರ್ಟ್‌ಫೋನ್ 8GB RAM + 128GB ಶೇಖರಣಾ ರೂಪಾಂತರಕ್ಕೆ ಸಿಎನ್‌ವೈ 2,198 (ಸರಿಸುಮಾರು ರೂ. 24,600), 8GB RAM + 256GB ಶೇಖರಣಾ ಆಯ್ಕೆಯನ್ನು ಸಿಎನ್‌ವೈ 2,398 (ಅಂದಾಜು 26,900ರೂ.) ಬೆಲೆಯನ್ನು ಹೊಂದಿದೆ. ಇನ್ನು ZTE S30 ಪ್ರೊ ಸಿಂಗಲ್ 8GB RAM + 256GB ಶೇಖರಣಾ ಮಾದರಿಗೆ ಸಿಎನ್‌ವೈ 2,998 (ಸರಿಸುಮಾರು ರೂ .33,600) ಬೆಲೆಯಿದೆ. ZTE S30 SE ಸಿಎನ್‌ವೈ 1,698 (ಸುಮಾರು ರೂ. 19,000) ಬೆಲೆಯನ್ನು ಹೊಂದಿದೆ. ಇನ್ನು ಈ ಮೂರು ಫೋನ್‌ಗಳು ಏಪ್ರಿಲ್ 3 ರಿಂದ ಚೀನಾದಲ್ಲಿ ಪ್ರಮುಖ ಚಿಲ್ಲರೆ ಚಾನೆಲ್‌ಗಳ ಮೂಲಕ ಮಾರಾಟವಾಗಲಿವೆ.


Click it and Unblock the Notifications
