ಸ್ಯಾಮ್‌ಸಂಗ್‌ನ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!..ಕಡಿಮೆ ಬೆಲೆಗೆ ಲಭ್ಯ!
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಸಂಸ್ಥೆಯು ಮೊಬೈಲ್‌ಗಳಿಗೆ ಸ್ಪೆಷಲ್ ಡಿಸ್ಕೌಂಟ್ ಲಭ್ಯ ಮಾಡುತ್ತಾ, ಗ್ರಾಹಕರ ಗಮನ ಸೆಳೆಯುತ್ತದೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್ ಸಹ ಭಾರೀ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.
ಹೌದು, ಫ್ಲಿಪ್‌ಕಾರ್ಟ್ ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಶೇ. 38% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 24,499ರೂ. ಇದ್ದು, ಆಫರ್‌ನಲ್ಲಿ ಗ್ರಾಹಕರು 14,999ರೂ. ಗಳ ದರದಲ್ಲಿ ನಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಕೂಡಾ ಲಭ್ಯ.

ಇನ್ನು ಈ 5G ಫೋನ್ 6000 mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿರುವುದು ಹೈಲೈಟ್ ಎನಿಸಿದೆ. ಜೊತೆಗೆ ಇದು 50 ಮೆಗಾಪಿಕ್ಸೆಲ್ ಸೆನ್ಸಾರ್ ಮೊದಲ ಕ್ಯಾಮೆರಾ ಒಳಗೊಂಡಿದೆ. ಖರೀದಿದಾರರು ಈ ಮೊಬೈಲ್ ಅನ್ನು ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಖರೀದಿ ಲಭ್ಯ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ 6.5 ಇಂಚಿನ ಫುಲ್ ಹೆಚ್‌ಡಿ ಸೂಪರ್ AMOLED ಮಾದರಿಯ ಪಡೆದಿದೆ. ಇದರ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದ್ದು, 120Hz ರಿಫ್ರೆಶ್ ರೇಟ್ ಒಳಗೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸ ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 6GB + 128GB ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಇದು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸಲ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ಸ್ಯಾಮ್‌ಸಂಗ್ ಸಂಸ್ಥೆಯ ಈ 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಇದರ ಜೊತೆಗೆ ಕನೆಕ್ಟಿವಿಟಿ ಸೌಲಬ್ಯಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯಗಳನ್ನು ಸಹ ಒಳಗೊಂಡಿದೆ.
ಈ ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಮೊಬೈಲ್ ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯ ಸಿಗಲಿದೆ. ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿ ಮಾಡಬಹುದು.


Click it and Unblock the Notifications








